HomeAgricultureರೈತರೇ ಗಮನಿಸಿ : ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ರೈತರೇ ಗಮನಿಸಿ : ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ತಿಳಿಸಿದ್ದಾರೆ.

*ಯೋಜನೆಗಳು

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ:
ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ ಬಾಳೆ, ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ಪಪ್ಪಾಯ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಸಪೋಟ, ಮಾವು, ಸೀತಾಫಲ, ಹುಣಸೆ, ಕರಿಬೇವು ಮತ್ತು ಗುಲಾಬಿ ಹಾಗೂ ಇತರೆ ಬೆಳೆಗಳಿಗೆ ಮತ್ತು ಬದುಗಳಲ್ಲಿ ತೆಂಗು ಸಸಿ ನಾಟಿ, ಕೃಷಿ ಹೊಂಡ, ಬದುಗಳ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕಗಳಿಗೆ ಸಹಾಯಧನ ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ

ಹೊಸ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಈರುಳ್ಳಿ ಶೇಖರಣ ಘಟಕ, ನೆರಳುಪರದೆ, ಪ್ಯಾಕ್ ಹೌಸ್ ಮತ್ತು ತಳ್ಳುವ ಗಾಡಿ ವಿವಿಧ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.50 ರಷ್ಟು ಲಭ್ಯತೆಯ ಮೇರೆಗೆ ಸಹಾಯಧನ ವಿತರಿಸಲಾಗುತ್ತದೆ.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ ಕಾರ್ಯಕ್ರಮದಡಿ ಸಹಾಯಧನವನ್ನು ನೀಡಲಾಗುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಹೊಸದಾಗಿ ಅಳವಡಿಸುವ ಫಲಾನುಭವಿಗಳಿಗೆ ಮಾತ್ರ ಶೇ.75 ರಂತೆ ಹಾಗೂ ಪ.ಜಾತಿ ಮತ್ತು ಪ.ಪಂಗಡ ಫಲಾನುಭವಿಗಳಿಗೆ ಶೇ.90 ರಂತೆ ಸಹಾಯಧನ ವಿತರಿಸಲಾಗುವುದು.

ಅಲ್ಪಸಂಖ್ಯಾತರಿಗೆ ಶೇ.15, ವಿಕಲಾಂಗಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಅನುದಾನ ಮೀಸಲಿರಿಸಲಾಗಿದೆ.ಆಸಕ್ತ ರೈತರು ಈ ಯೋಜನೆಗಳ ಸಹಾಯಧನ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿಗೆ ಸಂಪರ್ಕಿಸಿ, ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular