ಬೆಂಗಳೂರು: 5, 8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಉತ್ತರ ಪತ್ರಿಕೆಗಳ ಅವೈಜ್ಞಾನಿಕ ಮೌಲ್ಯಮಾಪನಕ್ಕೆ ವಿರೋಧ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರತಿದಿನ ಶಿಕ್ಷಕರು ಮೌಲ್ಯಮಾಪನ ಮಾಡಬೇಕಾದ ಉತ್ತರ ಪತ್ರಿಕೆಗಳ ಸಂಖ್ಯೆಯನ್ನು ಕಡಿತಗೊಳಿಸಿದೆ. ಶಿಕ್ಷಕರ ಹೊರೆ ಕಡಿಮೆ ಮಾಡಿದೆ.
ಶಿಕ್ಷಕರು ದಿನವೊಂದಕ್ಕೆ 5ನೇ ತರಗತಿಯ 80, 8ನೇ ತರಗತಿಯ 60 ಮತ್ತು 9ನೇ ತರಗತಿಯ 40 ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಬೇಕೆಂದು ಸೂಚಿಸಲಾಗಿತ್ತು. ಅದನ್ನು ಪರಿಸ್ಕರಿಸಲಾಗಿದ್ದು, 8ನೇ ತರಗತಿಯ 50, 9ನೇ ತರಗತಿಯ 30 ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡುವಂತೆ ತಿಳಿಸಲಾಗಿದೆ.
ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ 1 ಕೊಠಡಿ ಮೇಲ್ವಿಚಾರಣ ಕಾರ್ಯ ಮತ್ತು ಚುನಾವಣೆ ಕಾರ್ಯನಿರ್ವಹಿಸಬೇಕಿರುವುದರಿಂದ ಯಾವುದೇ ವಿಳಂಬಕ್ಕೆ ಆಸ್ಪದವಾಗದಂತೆ ನಿಗದಿತ ಕಾಲಾವಧಿಯಲ್ಲಿ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಬೇಕಿದೆ. ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮ ವಹಿಸಬೇಕು ಎಂದು ಹೇಳಲಾಗಿದೆ.