HomeKarnatakaಲೋಕಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಣೆ

ಲೋಕಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಣೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿ ಫಾರಂ ವಿತರಿಸಿದ್ದಾರೆ.

ಉಡುಪಿ -ಚಿಕ್ಕಮಗಳೂರು ಲೋಕಸಭೆ ಕ್ಷೇತ್ರ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ಹಾಗೂ ಚಿತ್ರದುರ್ಗ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಮೊದಲಾದವರಿಗೆ ನಿನ್ನೆ ರಾತ್ರಿ ಬಿ ಫಾರಂ ವಿತರಿಸಲಾಗಿದೆ. ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಿಸಿ ಶುಭ ಹಾರೈಸಿದ್ದಾರೆ.

ರಾಜ್ಯದಲ್ಲಿ ಮೊದಲ ಹಂತದಲ್ಲಿ 14 ಲೋಕಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ನಿನ್ನೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಏಪ್ರಿಲ್ 4 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 5ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 8 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಪ್ರಕಟಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉಡುಪಿ –ಚಿಕ್ಕಮಗಳೂರು, ಹಾಸನ, ಮಂಡ್ಯ, ಚಿತ್ರದುರ್ಗ, ಮೈಸೂರು –ಕೊಡಗು, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರಗಳಿಗೆ ಏ.26 ರಂದು ಚುನಾವಣೆ ನಡೆಯಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular