HomeKarnatakaಅಮಿತ್ ಶಾ ಬಗ್ಗೆ ಯತೀಂದ್ರ ಹೇಳಿಕೆಗೆ ಯಡಿಯೂರಪ್ಪ ಖಂಡನೆ: ಕೂಡಲೇ ಕ್ಷಮೆಯಾಚಿಸಲು ಆಗ್ರಹ

ಅಮಿತ್ ಶಾ ಬಗ್ಗೆ ಯತೀಂದ್ರ ಹೇಳಿಕೆಗೆ ಯಡಿಯೂರಪ್ಪ ಖಂಡನೆ: ಕೂಡಲೇ ಕ್ಷಮೆಯಾಚಿಸಲು ಆಗ್ರಹ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ನೀಡಿದ ಹೇಳಿಕೆಯನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಖಂಡಿಸಿದ್ದಾರೆ.

ನಮ್ಮ ಹಿರಿಯ ನಾಯಕರಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಗ್ಗೆ ಯತೀಂದ್ರ ಸಿದ್ದರಾಮಯ್ಯನವರ ಹೇಳಿಕೆ ಖಂಡನಾರ್ಹ ಮಾತ್ರವಲ್ಲ, ತೀರಾ ಕೀಳು ಮಟ್ಟದ್ದಾಗಿದೆ. ಒಬ್ಬ ಮಾಜಿ ಶಾಸಕರಾಗಿ ಮತ್ತು ರಾಜ್ಯದ ಮುಖ್ಯಮಂತ್ರಿಗಳ ಮಗನಾಗಿ ಕನಿಷ್ಠ ಘನತೆಯನ್ನೂ ಕೂಡ ಅವರು ಮರೆತಂತಿದೆ ಎಂದು ತಿಳಿಸಿದ್ದಾರೆ.

ಮೈಸೂರು ಹಾಗೂ ಕರ್ನಾಟಕದ ಇನ್ನಿತರ ಭಾಗಗಳಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ನಿಚ್ಚಳವಾಗಿದ್ದು, ಹತಾಶೆಯಿಂದ ಯತೀಂದ್ರ ಅವಹೇಳನಕಾರಿ ಪದ ಪ್ರಯೋಗಕ್ಕೆ ಮುಂದಾಗಿದ್ದಾರೆ. ದೇಶದ ಗೃಹ ಸಚಿವರ ಕುರಿತಾದ ಅವರ ಕೀಳು ಮಟ್ಟದ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಈ ಅವರು ಕೂಡಲೇ ಕ್ಷಮೆ ಕೇಳಬೇಕು. ಇನ್ನು ಮುಂದಾದರೂ ಸಾರ್ವಜನಿಕ ಜೀವನದಲ್ಲಿ ಸಭ್ಯತೆಯಿಂದ ವರ್ತಿಸುತ್ತಾರೆ ಎಂದು ನಿರೀಕ್ಷಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular