ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದರೆ ಮತ್ತೊಂದೆಡೆ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದೆ. ಮುಂದಿನ 2-3 ದಿನಗಳಲ್ಲಿ ರಾಜ್ಯದ 7 ಜಿಲ್ಲೆಗಳಲ್ಲಿ ತಾಪಮಾನ ಇನ್ನಷ್ಟು ಹೆಚ್ಚಳವಾಗಲಿದೆ.
ಉತ್ತರ ಕರ್ನಾಟಕದ ಕಲಬುರ್ಗಿ, ರಾಯಚೂರು, ಬಾಗಲಕೋಟೆ, ವಿಜಯಪುರ, ಯಾದಗಿರಿ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಮುಂದಿನ 24 ಗಂಟೆ ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಂಗಳೂರಿನಲ್ಲಿ ಉಷ್ಣಾಂಶ ಮಾರ್ಚ್ ತಿಂಗಳಲ್ಲಿ ವಾಡಿಕೆಗಿಂತ 3.3 ಡಿಗ್ರಿ ಹೆಚ್ಚು ದಾಖಲಾಗಿದೆ. ಏಪ್ರಿಲ್ ನಲ್ಲಿ ಇನ್ನಷ್ಟು ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ.