ಕೊಡಗು : ಕಾಡಾನೆ ದಾಳಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಕೊಡಗು ಜಿಲ್ಲೆಯಲ್ಲಿ ರೈತರೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ.
ಮೃತರನ್ನು ಹೊಸಗುತ್ತಿ ಗ್ರಾಮದ ಕಾಂತರಾಜು (45) ಎಂದು ಗುರುತಿಸಲಾಗಿದೆ. ಶನಿವಾರಸಂತೆ ಸಮೀಪದ ಹೊಸಗುತ್ತಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅವರು ಜಮೀನಿಗೆ ತೆರಳುವಾಗ ಕಾಡಾನೆ ದಾಳಿ ನಡೆಸಿದೆ. ಗಂಭೀರವಾಗಿ ಗಾಯಗೊಂಡ ಕಾಂತರಾಜು (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ.