HomeKarnatakaಶಿವಮೊಗ್ಗ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪಗೆ ಮತ್ತೊಂದು ಶಾಕ್: ದೇವಾಲಯದಲ್ಲಿ ಪ್ರಚಾರ ಹಿನ್ನಲೆ ನೀತಿ ಸಂಹಿತೆ...

ಶಿವಮೊಗ್ಗ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪಗೆ ಮತ್ತೊಂದು ಶಾಕ್: ದೇವಾಲಯದಲ್ಲಿ ಪ್ರಚಾರ ಹಿನ್ನಲೆ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲು

ಶಿವಮೊಗ್ಗ: ಶಿವಮೊಗ್ಗ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಈಶ್ವರಪ್ಪ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಕೇಸು ದಾಖಲಿಸಲಾಗಿದೆ. ಅವರು ಶಿವಮೊಗ್ಗದ ಗೋಪಾಳದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಪ್ರಚಾರ ನಡೆಸಿದ್ದಾರೆ. ಧಾರ್ಮಿಕ ಕೇಂದ್ರದಲ್ಲಿ ಪ್ರಚಾರ ಮಾಡಿದ್ದಕ್ಕೆ ತುಂಗಾ ನಗರ ಠಾಣೆಗೆ ಚುನಾವಣಾಧಿಕಾರಿ ದೂರು ನೀಡಿದ್ದಾರೆ. ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಈ ಹಿಂದೆ ಶಿಕಾರಿಪುರದಲ್ಲಿ ಅನುಮತಿಗಿಂತ ಹೆಚ್ಚಿನ ವಾಹನ ಬಳಸಿ ಬೈಕ್ ರ್ಯಾಲಿ, ಧಾರ್ಮಿಕ ಚಿಹ್ನೆ ಇರುವ ಬಾವುಟ ಬಳಸಿದ ಕಾರಣಕ್ಕೆ ಈಶ್ವರಪ್ಪ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular