alex Certify BIG NEWS: ಜೆಡಿಎಸ್ ಕಾರ್ಯಕರ್ತರು ಅತಂತ್ರ ಸ್ಥಿತಿ ತಲುಪಿದ್ದಾರೆ; ಬಿಜೆಪಿ-ಜೆಡಿಎಸ್ ಒಂದಾದ ತಕ್ಷಣ ಕಾರ್ಯಕರ್ತರು ಒಂದಾಗುತ್ತಾರಾ?; ಡಿಸಿಎಂ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೆಡಿಎಸ್ ಕಾರ್ಯಕರ್ತರು ಅತಂತ್ರ ಸ್ಥಿತಿ ತಲುಪಿದ್ದಾರೆ; ಬಿಜೆಪಿ-ಜೆಡಿಎಸ್ ಒಂದಾದ ತಕ್ಷಣ ಕಾರ್ಯಕರ್ತರು ಒಂದಾಗುತ್ತಾರಾ?; ಡಿಸಿಎಂ ಟಾಂಗ್

ಬೆಂಗಳೂರು: ಬಿಜೆಪಿ ಗೊಂದಲದ ಗೂಡಾಗಿದೆ. ಸದಾನಂದ ಗೌಡರು, ನಳೀನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹ ಸೇರಿದಂತೆ ನಮ್ಮ ವಿರುದ್ಧ ಹೋರಾಟ ಮಾಡಿದವರನ್ನು ಏಕಾಏಕಿ ಕೈಬಿಟ್ಟಿದ್ದಾರೆ 40 ವರ್ಷ ರಾಜಕಾರಣ ಮಾಡಿಕೊಂಡು ಬಂದವರನ್ನು ಈ ರೀತಿ ಕೈಬಿಟ್ಟರೆ ಹೇಗೆ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಬಿಜೆಪಿ ಪಕ್ಷಕ್ಕಾಗಿ ದುಡಿದವರಿಗೆ ಟಿಕೆಟ್ ನೀಡದೇ ದುರ್ಬಲ ತಂತ್ರಗಾರಿಕೆ ಮಾಡಿದೆ. ನಮ್ಮ ಪಕ್ಷ ಭವಿಷ್ಯದಲ್ಲಿ 30-40 ವರ್ಷಗಳ ಕಾಲ ರಾಜಕಾರಣ ಮಾಡಬಲ್ಲ ಯುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದೇವೆ. ಇವರು ರಾಜಕೀಯವಾಗಿ ಪಕ್ಷಕ್ಕೆ ಅಡಿಪಾಯ ಆಗಲಿದ್ದಾರೆ ಎಂದರು.

ಕಾರ್ಯಕರ್ತರ ಹೊಂದಾಣಿಕೆ ಇಲ್ಲದ ಕಾರಣ ಚನ್ನಪಟ್ಟಣದಲ್ಲಿ ಅಮಿತ್ ಶಾ ರೋಡ್ ಶೋ ನಡೆಸುತಿದ್ದಾರೆ. ಅವರು ಚನ್ನಪಟ್ಟಣವನ್ನೇ ಯಾಕೆ ಆಯ್ಕೆ ಮಾಡಿದ್ದಾರೆ ಎಂದರೆ. ಅಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಒಂದಾಗಿದ್ದು, ಕಾರ್ಯಕರ್ತರು ಒಂದಾಗುತ್ತಿಲ್ಲ. ಕಾರ್ಯಕರ್ತರು ದಿನಬೆಳಗಾದರೆ ರಾಜಕೀಯ ಸಂಘರ್ಷ ಮಾಡುತ್ತಿದ್ದಾರೆ. ಈ ಮೈತ್ರಿಯಿಂದ ಏನಾಗಲಿದೆ ಎಂಬ ಅನುಭವ ಸಿ.ಪಿ.ಯೋಗೇಶ್ವರ್ ಗೆ ಇಲ್ಲ. ಇನ್ನು ಜೆಡಿಎಸ್ ಕಾರ್ಯಕರ್ತರು ಅತಂತ್ರ ಸ್ಥಿತಿ ತಲುಪಿದ್ದಾರೆ. ಅಮಿತ್ ಶಾ ಬಂದರೆ ಬಲ ಬರಬಹುದು ಎಂದು ಮಾಡುತ್ತಿದ್ದಾರೆ. ಇಬ್ಬರೂ ಸೇರಿ ಕಾರ್ಯಕರ್ತರ ಸಭೆ ಯಾಕೆ ಮಾಡಲಿಲ್ಲ? ಇವರಿಬ್ಬರೂ ಒಂದಾದ ತಕ್ಷಣ ಕಾರ್ಯಕರ್ತರು ಒಂದಾಗುತ್ತಾರಾ? ರಾಮನಗರ ಹಾಗೂ ಮಂಡ್ಯ ಜಿಲ್ಲೆ ರಾಜಕಾರಣ ನೋಡಲು ಆಗುತ್ತಿಲ್ಲ ಎಂದು ಲೇವಡಿ ಮಾಡಿದರು.

ಕಳೆದ ಬಾರಿ ಕುಮಾರಸ್ವಾಮಿ ಅವರು ಆಡಿದ ಮಾತು, ಹೇಳಿದ ವಿಚಾರ, ನಡೆದುಕೊಂಡ ರೀತಿ ನೋಡಿದರೆ ಈಗ ಪರಿಸ್ಥಿತಿ ಬದಲಾಗಿದೆ. ಕಳೆದ ಬಾರಿ ಚುನಾವಣೆಯಲ್ಲಿ ನಿಖಿಲ್ ಪರ ಪ್ರಚಾರ ಮಾಡುವಂತೆ ಚೆಲುವರಾಯಸ್ವಾಮಿ ಅವರಿಗೆ ಆಹ್ವಾನ ನೀಡಿ ಎಂದು ಹೇಳಿದೆ. ಅನಿತಾ ಕುಮಾರಸ್ವಾಮಿ ಅವರು ಕೂಡ ಚೆಲುವರಾಯಸ್ವಾಮಿ ಮನೆಗೆ ಹೋಗಲು ಸಿದ್ಧರಿದ್ದರು. ಆದರೆ ಕುಮಾರಸ್ವಾಮಿ ಅವರು ಚೆಲುವರಾಯಸ್ವಾಮಿ ಅವರ ಮನೆಗೆ ಹೋಗೋದು ಬೇಡ ಎಂದಿದ್ದರು. ಈಗ ಕುಮಾರಸ್ವಾಮಿ ಎಲ್ಲರ ಮನೆಗೆ ಹೋಗಲು ಸಿದ್ಧ ಎಂದು ಹೇಳುತ್ತಿದ್ದಾರೆ. ಅವರಲ್ಲಿ ಆಗಿರುವ ಪರಿವರ್ತನೆಗೆ ಬಹಳ ಸಂತೋಷ. ಮೈತ್ರಿ ಸರ್ಕಾರವನ್ನು ಬೀಳಿಸಿದ ಬಿಜೆಪಿ ನಾಯಕರ ಜತೆಗೆ ತಬ್ಬಾಡುತ್ತಿದ್ದಾರೆ. ಇದನ್ನು ಆ ಮತದಾರರೇ ತೀರ್ಮಾನ ಮಾಡಬೇಕು ಎಂದು ತಿಳಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...