ಬೆಂಗಳೂರು : ಬೆಂಗಳೂರಿನ ಕಾಡುಗೋಡಿ ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
ವೈಟ್ ಫೀಲ್ಡ್ ಮುಳ್ಯ ರಸ್ತೆಯ ಐಟಿಪಿಎಲ್ ಮುಂಭಾಗ ಬೆಂಕಿ ಕಾಣಿಸಿಕೊಂಡಿದೆ. 700 ಎಕರೆ ಅರಣ್ಯ ವ್ಯಾಪ್ತಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ತಿಳಿದು ಬಂದಿಲ್ಲ.ಭಾರಿ ಪ್ರಮಾಣದಲ್ಲಿ ಬೆಂಕಿ ಹರಡಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.