HomeKarnatakaSHOCKING: ಕಾದ ಕಾವಲಿಯಂತಾದ ಕರ್ನಾಟಕ: 11 ಜಿಲ್ಲೆಗಳಲ್ಲಿ 40 ಡಿಗ್ರಿ ದಾಟಿದ ತಾಪಮಾನ

SHOCKING: ಕಾದ ಕಾವಲಿಯಂತಾದ ಕರ್ನಾಟಕ: 11 ಜಿಲ್ಲೆಗಳಲ್ಲಿ 40 ಡಿಗ್ರಿ ದಾಟಿದ ತಾಪಮಾನ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ತೀವ್ರ ಏರಿಕೆಯಾಗುತ್ತಿದ್ದು, 11 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಬಿಸಿ ತಟ್ಟಲಿದೆ ಎಂದು ಹೇಳಲಾಗಿದೆ.

ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ 42 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಕರ್ನಾಟಕದ 11 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚು ದಾಖಲಾಗಿದೆ. ಯಾದಗಿರಿಯಲ್ಲಿ 41.8, ವಿಜಯಪುರದಲ್ಲಿ 40.9, ಬಳ್ಳಾರಿ, ವಿಜಯನಗರದಲ್ಲಿ 40.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಏಪ್ರಿಲ್ 3ರಿಂದ 5ರವರೆಗೆ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾದ ವರದಿಯಾಗಿದೆ. ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಇರಲಿದ್ದು, ಬಾಗಲಕೋಟೆ, ಬೆಳಗಾವಿ, ವಿಜಯಪುರ ಹಲವೆಡೆ ಗುಡುಗು, ಮಿಂಚು ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular