2023ರಲ್ಲಿ ತೆರೆಕಂಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬ್ಲಾಕ್ ಬಸ್ಟರ್ ಹಿಟ್ ಚಿತ್ರ ‘ಕಾಟೇರ’ ಇದೇ ಏಪ್ರಿಲ್ 7 ಕ್ಕೆ ಜನಪ್ರಿಯ ವಾಹಿನಿಯಾದ ಜೀ ಕನ್ನಡದಲ್ಲಿ ಸಂಜೆ 7:00ಗಂಟೆಗೆ ಪ್ರಸಾರವಾಗಲಿದೆ. ಈ ಕುರಿತು ಜೀ ಕನ್ನಡ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದೆ.
ಈ ಚಿತ್ರವನ್ನು ತರುಣ್ ಸುಧೀರ್ ನಿರ್ದೇಶಿಸಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಆರಾಧನಾ ಮುಖ್ಯ ಭೂಮಿಕೆಯಲ್ಲಿದ್ದಾರೆ. ಶ್ರುತಿ, ಜಗಪತಿ ಬಾಬು, ಕುಮಾರ್ ಗೋವಿಂದ್, ಅವಿನಾಶ್, ಪದ್ಮ ವಾಸಂತಿ, ಶ್ರೀನಿವಾಸ ಮೂರ್ತಿ, ಶ್ವೇತಾ ಪ್ರಸಾದ್, ವಿನೋದ್ ಕುಮಾರ್, ಉಳಿದ ಪಾತ್ರ ವರ್ಗದಲ್ಲಿದ್ದಾರೆ. ವಿ ಹರಿಕೃಷ್ಣ ಸಂಗೀತ ಸಂಯೋಜನೆ ನೀಡಿದ್ದು, ಕೆಎಂ ಪ್ರಕಾಶ್ ಸಂಕಲನ, ಸುಧಾಕರ್ ಎಸ್ ರಾಜ್ ಛಾಯಾಗ್ರಹಣವಿದೆ. ಇನ್ನುಳಿದಂತೆ ಮಾಸ್ತಿ ಡೈಲಾಗ್ ಬರೆದಿದ್ದಾರೆ. ರಾಕ್ ಲೈನ್ ವೆಂಕಟೇಶ್ ತಮ್ಮ ರಾಕ್ ಲೈನ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ.