ನವದೆಹಲಿ : ಕಾಂಗ್ರೆಸ್ ಗೆ ಕೇಂದ್ರದಿಂದ ಬಿಗ್ ರಿಲೀಫ್ ಸಿಕ್ಕಿದ್ದು, ಚುನಾವಣೆ ಮುಗಿಯವರೆಗೂ ತೆರಿಗೆ ವಸೂಲಿ ಇಲ್ಲ ಎಂದು ಹೇಳಿದೆ.
ಲೋಕಸಭಾ ಚುನಾವಣೆ ಮುಗಿಯುವರೆಗೂ ಬಾಕಿ ಉಳಿಸಿಕೊಂಡಿರುವ ಸುಮಾರು 3,500 ಕೋಟಿ ರೂ. ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಭರವಸೆ ನೀಡಿದೆ.
ಜುಲೈ 24 ರವರೆಗೆ ಕಾಂಗ್ರೆಸ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಸೋಮವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಚುನಾವಣೆ ಮುಗಿಯುವವರಗೂ ಯಾವುದೇ ಕ್ರಮ ಬೇಡ ಎಂದು ಆದಾಯ ತೆರಿಗೆ ಇಲಾಖೆ ಸೋಮವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ಆದಾಯ ತೆರಿಗೆ ಇಲಾಖೆ ಒಟ್ಟು 3,567 ಕೋಟಿ ರೂ. ಬಾಕಿ ತೆರಿಗೆ ಪಾವತಿಸುವಂತೆ ನೀಡಿದ ನೋಟಿಸ್ ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಈ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಮುಂದಿನ ವಿಚಾರಣೆಯನ್ನು ಜುಲೈ ಎರಡನೇ ವಾರಕ್ಕೆ ಮುಂದೂಡಿತು.