ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಿದ್ದು, ಭಾನುವಾರ ಅನಧೀಕೃತವಾಗಿ ಮದ್ಯ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿ, ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.
ಸಂಡೂರು ತಾಲ್ಲೂಕಿನ ಬನ್ನಿಹಟ್ಟಿ ಗ್ರಾಮದಿಂದ ಲಿಂಗದಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ರಸ್ತೆಗಾವಲು ಸಮಯದಲ್ಲಿ ಕಪ್ಪು ಬಣ್ಣದ ಹೊಂಡಾ ದ್ವಿಚಕ್ರ ವಾಹನದಲ್ಲಿ 8.640 ಲೀಟರ್ (ಅಂದಾಜು ಮೌಲ್ಯ ರೂ.53,840) ಮದ್ಯವನ್ನು ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆಹಚ್ಚಿ, ವಾಹನ ಸವಾರನ್ನು ವಶಕ್ಕೆ ಪಡೆದುಕೊಂಡು ಮದ್ಯ ಹಾಗೂ ವಾಹನವನ್ನು ಜಪ್ತಿಪಡಿಸಿ, ಪ್ರಕರಣ ದಾಖಲಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಎನ್.ಮಂಜುನಾಥ ಅವರು ತಿಳಿಸಿದ್ದಾರೆ.