ಬೆಂಗಳೂರು : ಸೋಶಿಯಲ್ ಮೀಡಿಯಾದಲ್ಲಿ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಬಿಜೆಪಿಯ ಕಾನೂನು ಪ್ರಕೋಷ್ಟ ಮಾಜಿ ಸಂಚಾಲಕ ಯೋಗೇಂದ್ರ ಹೊಡಗಟ್ಟ ಅವರು ದೂರು ಸಲ್ಲಿಸಿದ್ದಾರೆ. ಮೊದಲು ಬೆಂಗಳೂರಿನ ಜನಪ್ರತಿನಿಧಿ ಕೋರ್ಟ್ ಗೆ ಖಾಸಗಿ ದೂರು ಸಲ್ಲಿಸಿದ್ದರು. ಇದೀಗ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ನಾನು ಬಿಜೆಪಿಯ ಕರ ಸೇವಕ ನನ್ನನ್ನು ಬಂಧಿಸಿ ಎಂಬ ಪೋಸ್ಟರ್ ತಿರುಚಿ ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ಕಾಂಗ್ರೆಸ್ ಪೋಸ್ಟ್ ಮಾಡಿತ್ತು. ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಹಿನ್ನೆಲೆ ಜನಪ್ರತಿನಿಧಿಗಳ ಕೋರ್ಟ್ ತನಿಖೆಗೆ ಆದೇಶಿಸಿತ್ತು. ಅಂತೆಯೇ ಇದೀಗ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.