ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್ ಜೈಂಟ್ಸ್ ಪಂದ್ಯ ನಡೆಯಲಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಈ ಹಿನ್ನೆಲೆ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆ ತನಕ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಈ ಸ್ಥಳಗಳಲ್ಲಿ ವಾಹನ ನಿಲುಗಡೆ ನಿಷೇಧ
ಕ್ವೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.
ಈ ಸ್ಥಳಗಳಲ್ಲಿ ಪಾರ್ಕಿಂಗ್ ಗೆ ಅವಕಾಶ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ ವರ್ಸಸ್ ಎಲ್ಎಸ್ಜಿ ಐಪಿಎಲ್ ಪಂದ್ಯ ವೀಕ್ಷಣಗೆ ಬರುವವರು ತಮ್ಮ ವಾಹನಗಳನ್ನು ಪಾರ್ಕ್ ಮಾಡುವುದಕ್ಕೆ ಕೆಲವು ಪ್ರದೇಶಗಳನ್ನು ಗುರುತಿಸಲಾಗಿದೆ. ಅಲ್ಲೇ ವಾಹನ ಪಾರ್ಕ್ ಮಾಡಬೇಕು ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಯುಬಿ ಸಿಟಿ ಪಾರ್ಕಿಂಗ್ ಸ್ಥಳ, ಬಿಎಂಟಿಸಿ ಬಸ್ ನಿಲ್ದಾಣದ ಮೊದಲನೆ ಮಹಡಿ ಮತ್ತು ಓಲ್ಡ್ ಕೆಜಿಐಡಿ ಬಿಲ್ಡಿಂಗ್, ಕಿಂಗ್ಸ್ ರಸ್ತೆ, (ಕಬ್ಬನ್ಪಾರ್ಕ್ ಒಳಭಾಗ) ದಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ.