ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಹೆಚ್.ನಿಂಗಪ್ಪ, ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಹೆಚ್.ನಿಂಗಪ್ಪ ಅವರು ಇಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಗೆ ಸೇರ್ಪಡೆಯಾದರು. ಬೆಂಗಳೂರಿನ ಜೆ ಪಿ ಭವನದಲ್ಲಿ ನಡೆದ ಪಕ್ಷ ಕಾರ್ಯಕ್ರಮದಲ್ಲಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ.ಆಂಜಿನಪ್ಪ, ಎಂಎಲ್ಸಿ ತಿಪ್ಪೇಸ್ವಾಮಿ , ರಮೇಶ್ಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು.