ಮಂಡ್ಯ : ಕಮಲದ ಧ್ವಜ ಹಾಕಿಕೊಂಡ ಕುಮಾರಸ್ವಾಮಿ ಬದುಕಿದ್ದು ಸತ್ತಂತೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ವಾಗ್ಧಾಳಿ ನಡೆಸಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ ಮಂಡ್ಯದಲ್ಲಿ ಪುಟ್ಟರಾಜು ಅವರು ಟಿಕೆಟ್ಗಾಗಿ ಕಾದು ಕುಳಿತಿದ್ದ, ಇದೀಗ ಅವರಿಗೆ ಗೋವಿಂದ. ಕುಮಾರಸ್ವಾಮಿ ಕಮಲದ ಧ್ವಜ ಹಾಕಿಕೊಂಡಿದ್ದಾರೆ. ಬದುಕಿದ್ದು ಸತ್ತಂತೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ ಕಳೆದ ಬಾರಿ ಮೈತ್ರಿಯಂತೆ ಕುಮಾರಸ್ವಾಮಿ ಅವರಿಗೆ ಸಹಾಯ ಮಾಡಲು ಬಂದಿದ್ದೆ. ಆದರೆ ಅವರಿಗೆ ಅಧಿಕಾರ ಉಳಿಸಿಕೊಳ್ಳಲು ಆಗಿಲ್ಲ. ಆದರೆ ಈಗ ತಮ್ಮ ಅಧಿಕಾರ ತೆಗೆದವರ ಜೊತೆಯೇ ಕುಮಾರಸ್ವಾಮಿ ಹೋಗಿದ್ದಾರೆ ಎಂದರು.
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ 1 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಭಾವಿಸಿದ್ದೆ. ಆದರೆ ಈಗ ಜನರ ಪ್ರೀತಿ ವಿಶ್ವಾಸ ನೋಡಿದ ಮೇಲೆ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ ಎಂಬ ವಿಶ್ವಾಸ ಮೂಡಿದೆ ಎಂದರು. ಮತ ಯಂತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒತ್ತುವ ಓಟಿನ ಸದ್ದು ಮೋದಿ ಅವರಿಗೆ ಕೇಳಿಸಬೇಕು ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.