alex Certify BIG NEWS: ಮುಂದಿನ ಮೂರು ತಿಂಗಳು ರಣಭೀಕರ ಬಿಸಿಲು; ರಾಜ್ಯದಲ್ಲಿ ಬಿಸಿಗಾಳಿ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಂದಿನ ಮೂರು ತಿಂಗಳು ರಣಭೀಕರ ಬಿಸಿಲು; ರಾಜ್ಯದಲ್ಲಿ ಬಿಸಿಗಾಳಿ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಭೀಕರ ಬರಗಾಲ, ಮತ್ತೊಂದೆಡೆ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ. ಈ ನಡುವೆ ಮುಂದಿನ ಮೂರು ತಿಂಗಳು ರಣಬಿಸಿಲು ಇರಲಿದ್ದು, ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಏಪ್ರಿಲ್ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಅಂದರೆ 2ರಿಂದ 8 ದಿನಗಳ ಕಾಲ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದಿಂದ ರಾಜಧಾನಿ ಬೆಂಗಳೂರಿನವರೆಗೂ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಏಪ್ರಿಲ್ ನಿಂದ ಜೂನ್ ತಿಂಗಳ ಅವಧಿಯಲ್ಲಿ ಬಯಲುಸೀಮೆಯ ಬಹುತೇಕ ಭಾಗಗಳಲ್ಲಿ ಬಿಸಿಗಾಳಿ ಬೀಸಲಿದೆ. ಇದು ಲೋಕಸಭಾ ಚುನವಣೆಯ ಮತದಾನದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಗುಜರಾತ್, ಮಧ್ಯ ಮಹಾರಾಷ್ಟ್ರ, ಉತ್ತರ ಕರ್ನಾಟಕ, ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ, ಉತ್ತರ ಛತ್ತೀಸ್ ಗಢ, ಆಂಧ್ರಪ್ರದೇಶಗಳಲ್ಲಿ ಬಿಸಿಗಾಳಿ ಕೆಟ್ಟ ಪರಿಣಾಮ ಬೀರುವ ಮುನ್ಸೂಚನೆ ಇದೆ. ಈ ಸಮಯದಲ್ಲಿ ಸುಮಾರು 10-20 ದಿನಗಳ ವರೆಗೆ ಉಷ್ಣ ಅಲೆ ಇರಲಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಮಾಕ ಮಾರ್ಚ್ ತಿಂಗಳ ಮಧ್ಯಭಾಗದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯಾಗುವ ನಿರೀಕ್ಷೆ ಇತ್ತು. ಆದರೆ ಬೆಳಗಾವಿ, ಕೊಡಗು, ವಿಜಯಪುರದ ಕೆಲ ಭಾಗಗಳನ್ನು ಹೊರತುಪಡಿಸಿದರೆ ಉಳಿದಕಡೆ ಮಳೆಯ ಸುಳಿವಿಲ್ಲ. ಒಟ್ಟಾರೆ ಮುಂದಿನದಿನಗಳಲ್ಲಿ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಬಿಸಿಗಾಳಿ ಜನರನ್ನು ಇನ್ನಷ್ಟು ಹೈರಾಣಾಗಿಸಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...