ತೈವಾನ್ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ. ರಿಕ್ಟರ್ ಮಾಪಕದಲ್ಲಿ 7.5ರಷ್ಟು ಭೂಕಂಪದ ತೀವ್ರತೆ ದಾಖಲಾಗಿದೆ.
ತೈವಾನ್ ಕರಾವಳಿ ಪ್ರದೇಶದಲ್ಲಿ 7.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ರಾಜಧಾನಿ ತೈಪೈನ್ನು ನಡುಗಿಸಿದೆ. ಪೂರ್ವ ತೈವಾನ್ ನಲ್ಲಿ ಭೂಕಂಪದ ತೀವ್ರತೆಗೆ ಹಲವು ಕಟ್ಟಡಗಳು ಧರಾಶಾಹಿಯಾಗಿವೆ. ಭೂಕಂಪನದಿಂದಾಗಿ ಹಲವೆಡೆ ವಿದ್ಯುತ್ ವ್ಯತ್ಯಯವುಂಟಾಗಿದೆ. ಇಂಟರ್ ನೆಟ್ ಸೇವೆ ಸ್ಥಗಿತಗೊಂಡಿದೆ.
ತೈವಾನ್, ಓಕಿನಾವಾ, ದಕ್ಷಿಣ ಜಪಾನ್ ಹಾಗೂ ಫಿಲಿಫೈನ್ಸ್ ದ್ವೀಪಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಶಾಂಘೈವರೆಗೂ ಭೂಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ. ಸಾವುನೋವಿನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.