ಬೆಂಗಳೂರು : ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಂಸದೆ ಶೋಭಾ ಕರಂದ್ಲಾಜೆ ಇಂದು ನಾಮಪತ್ರ ಸಲ್ಲಿಕೆ ಮಾಡಿದರು.
ತಮ್ಮ ಬೆಂಬಲಿಗರು, ಕಾರ್ಯಕರ್ತರ ಜೊತೆ ಬಂದ ಶೋಭಾ ಕರಂದ್ಲಾಜೆ ಬೆಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು.
ಚಿಕ್ಕಮಗಳೂರು- ಉಡುಪಿ ಕ್ಷೇತ್ರದ ಸದಸ್ಯೆ ಶೋಭಾ ಕರಂದ್ಲಾಜೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಲು ತೆರೆ ಮರೆಯಲ್ಲಿ ಪ್ರಯತ್ನಗಳನ್ನು ಆರಂಭಿಸಿದರು. ಬಿಜೆಪಿಯಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಈ ಹಿಂದೆ ಇವರು ಎರಡು ಬಾರಿಯಿಂದ ಪ್ರತಿನಿಧಿಸುತ್ತಿರುವ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯವರೇ ಗೋ ಬ್ಯಾಕ್ ಶೋಭಾ ಚಳವಳಿ ಆರಂಭಿಸಿದ್ದರು. ಇದೀಗ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.