HomeIndiaBREAKING : ವಯನಾಡು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ

BREAKING : ವಯನಾಡು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡ್ ಲೋಕಸಭಾ ಕ್ಷೇತ್ರದಿಂದ ಏಪ್ರಿಲ್ 3ರಂದು ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 2019 ರ ಲೋಕಸಭಾ ಚುನಾವಣೆಯಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದ ಕ್ಷೇತ್ರದಲ್ಲಿ ರೋಡ್ ಶೋ ಕೂಡ ನಡೆಸಿದ್ದಾರೆ. ಇದಾದ ಬಳಿಕ ವಯನಾಡ್ ಲೋಕಸಭಾ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ರಾಹುಲ್ ಗಾಂಧಿ ಹೆಲಿಕಾಪ್ಟರ್ ಮೂಲಕ ಮುಪ್ಪೈನಾಡ್ ಗ್ರಾಮಕ್ಕೆ ಆಗಮಿಸಿದ್ದು, ರಸ್ತೆ ಮೂಲಕ ಕಲ್ಪೆಟ್ಟಾವರೆಗೆ ಪ್ರಯಾಣಿಸಿದ್ದಾರೆ. ನಂತರ ಅವರು ಕಲ್ಪೆಟ್ಟಾದಿಂದ ರೋಡ್ ಶೋ ನಡೆಸಿದ್ದಾರೆ. ರಾಹುಲ್ ಗಾಂಧಿ ಅವರೊಂದಿಗೆ ಅವರ ಸಹೋದರಿ ಪ್ರಿಯಾಂಕಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಮತ್ತು ದೀಪಾ ದಾಸ್ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ರೋಡ್ ಶೋನಲ್ಲಿ ಭಾಗವಹಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular