ಬೆಂಗಳೂರು : ಹೈಕೋರ್ಟ್ ನಲ್ಲಿ ಜಡ್ಜ್ ಮುಂದೆ ವ್ಯಕ್ತಿಯೋರ್ವ ಕುತ್ತಿಗೆ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ.
ಕರ್ನಾಟಕ ಹೈಕೋರ್ಟ್ ನ ಹಾಲ್ ಒಂದರಲ್ಲಿ ಈ ಘಟನೆ ನಡೆದಿದೆ. ಪ್ರಕರಣವೊಂದರ ವಿಚಾರಣೆ ನಡೆಯುತ್ತಿದ್ದ ವೇಳೆ ಜಡ್ಜ್ ಮುಂದೆಯೇ ವ್ಯಕ್ತಿಯೋರ್ವ ಚಾಕುವಿನಿಂದ ಕುತ್ತಿಗೆ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಮೈಸೂರು ಮೂಲದ ಶ್ರೀನಿವಾಸ್ (51) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಶ್ರೀನಿವಾಸ್ ಅವರಿಗೆ ಸಂಬಂಧಿಸಿದ ಪ್ರಕರಣದೊಂದು ಹೈಕೋರ್ಟ್ ಮೆಟ್ಟಿಲೇರಿದೆ. ಇಂದು ಪ್ರಕರಣದ ವಿಚಾರಣೆ ನಡೆಯುತ್ತಿತ್ತು. ಪ್ರಕರಣದ ವಿಚಾರಣೆ ಕೊನೆಯಾಗುತ್ತಿದ್ದಂತೆ ಅರ್ಜಿಯೊಂದನ್ನು ನೀಡಿ ನ್ಯಾಯಮೂರ್ತಿಗಳ ಎದುರು ಬಂದ ಶ್ರೀನಿವಾಸ್ ಅಚಾಕುವಿನಂತಹ ಸಣ್ಣ ವಸ್ತುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣವೇ ಆತನನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಪ್ರಕರಣವೊಂದರ ವಿಚಾರಣೆ ನಡೆಯುತ್ತಿದ್ದ ವೇಳೆ ಜಡ್ಜ್ ಮುಂದೆಯೇ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.