alex Certify ಬಿಸಿಲಿನ ತಾಪಮಾನ ಹೆಚ್ಚಳ ; ಅಂಗನವಾಡಿ ಕೇಂದ್ರಗಳ ವೇಳಾಪಟ್ಟಿ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಸಿಲಿನ ತಾಪಮಾನ ಹೆಚ್ಚಳ ; ಅಂಗನವಾಡಿ ಕೇಂದ್ರಗಳ ವೇಳಾಪಟ್ಟಿ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿರುವ ಹಿನ್ನೆಲೆ ಅಂಗನವಾಡಿ ಕೇಂದ್ರಗಳ ವೇಳಾಪಟ್ಟಿ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವುದರಿಂದ ಏಪ್ರಿಲ್ ಮತ್ತು ಮೇ-2024ರ ಮಾಹೆಗಳಲ್ಲಿ ಕಲಬುರಗಿ, ಬಳ್ಳಾರಿ, ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್ ವಿಜಯಪುರ ಮತ್ತು ಬಾಗಲಕೋಟೆ, ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳ ವೇಳಾಪಟ್ಟಿಯನ್ನು ಬೆಳಿಗ್ಗೆ 08:00 ಗಂಟೆಯಿಂದ ಮಧ್ಯಾಹ್ನ 12.00 ಗಂಟೆಯವರೆಗೆ, ತಾತ್ಕಾಲಿಕವಾಗಿ ಪರಿಷ್ಕರಿಸಲಾಗಿದೆ.ಬದಲಾದ ವೇಳಾಪಟ್ಟಿಯಂತೆ ಐಸಿಡಿಎಸ್ ಸೇವೆಗಳನ್ನು ನಿಯಮಾನುಸಾರ ಯಾವುದೇ ಅಡೆತಡೆ ಇಲ್ಲದೆ ಅಂಗನವಾಡಿ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮವಹಿಸುವುದು ಎಂದು ಸರ್ಕಾರದ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...