HomeIndiaBREAKING : ಮಹಾರಾಷ್ಟ್ರದಲ್ಲಿ ಭೀಕರ ಅಗ್ನಿ ಅವಘಡ, 7 ಮಂದಿ ಸಜೀವ ದಹನ..!

BREAKING : ಮಹಾರಾಷ್ಟ್ರದಲ್ಲಿ ಭೀಕರ ಅಗ್ನಿ ಅವಘಡ, 7 ಮಂದಿ ಸಜೀವ ದಹನ..!

ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರದಲ್ಲಿ ಇಂದು ಸಂಭವಿಸಿದ ಅಗ್ನಿ ದುರಂತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಬೆಂಕಿಯಲ್ಲಿ ಮೂವರು ಮಹಿಳೆಯರು, ಇಬ್ಬರು ಪುರುಷರು ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಜಾನೆ 4 ಗಂಟೆ ಸುಮಾರಿಗೆ ಟೈಲರಿಂಗ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೆರೆಹೊರೆಯಲ್ಲಿ ಆತಂಕ ಸೃಷ್ಟಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು, ಆದರೆ ಅಷ್ಟೊತ್ತಿಗಾಗಲೇ ಏಳು ಜನರು ಬೆಂಕಿಯಲ್ಲಿ ಸಾವನ್ನಪ್ಪಿದ್ದರು.

ಆಲಂ ಟೈಲರ್ಸ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸಂಭಾಜಿ ನಗರದ ಪೊಲೀಸ್ ಆಯುಕ್ತ ಮನೋಜ್ ಲೋಹಿಯಾ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಮುಂಜಾನೆ 4 ಗಂಟೆ ಸುಮಾರಿಗೆ ಅಂಗಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ಮುಂಜಾನೆ ೪.೧೫ ಕ್ಕೆ ಘಟನೆಯ ಬಗ್ಗೆ ಪೊಲೀಸರಿಗೆ ತಿಳಿದಿದೆ. ಬೆಂಕಿಯ ನಂತರ, ಅಂಗಡಿಯ ಮೇಲೆ ಕುಟುಂಬ ವಾಸಿಸುತ್ತಿದ್ದ ಮೊದಲ ಮಹಡಿಗೆ ಹೊಗೆ ಪ್ರವೇಶಿಸಿತು. ಉಸಿರುಗಟ್ಟಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಆಯುಕ್ತ ಮನೋಜ್ ಲೋಹಿಯಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular