HomeKarnatakaಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಈಡೇರಿದ ಬಹುದಿನದ ಬೇಡಿಕೆ: ಸಾಂದರ್ಭಿಕ ರಜೆ ಮಂಜೂರು ಮಾಡಿ ಸರ್ಕಾರ...

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಈಡೇರಿದ ಬಹುದಿನದ ಬೇಡಿಕೆ: ಸಾಂದರ್ಭಿಕ ರಜೆ ಮಂಜೂರು ಮಾಡಿ ಸರ್ಕಾರ ಆದೇಶ

ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಮಾಸಿಕ ಒಂದು ಸಾಂದರ್ಭಿಕ ರಜೆ ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ.

ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಸಿಕ 15 ರಿಂದ 19 ಗಂಟೆ ಕಾರ್ಯಭಾರ ನಿರ್ವಹಿಸುವ ಅತಿಥಿ ಉಪನ್ಯಾಸಕರಿಗೆ ತಿಂಗಳಿಗೊಂದು ಸಾಂದರ್ಭಿಕ ರಜೆ ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ.

ಈ ಮೂಲಕ ಅತಿಥಿ ಉಪನ್ಯಾಸಕರ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ. ಈ ಸಾಂದರ್ಭಿಕ ರಜೆ ಕಾರ್ಯಭಾರವನ್ನು ಇತರೆ ದಿನಗಳಲ್ಲಿ ಸರಿದೂಗಿಸುವಂತೆ ಉನ್ನತ ಶಿಕ್ಷಣ ಇಲಾಖೆ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದಕ್ಕೆ ಆಕ್ಷೇಪಿಸಿರುವ ಅತಿಥಿ ಉಪನ್ಯಾಸಕರು ರಜೆ ದಿನದ ಕಾರ್ಯಭಾರ ಬೇರೆ ದಿನ ಸರಿದೂಗಿಸಬೇಕು ಎನ್ನುವುದಾದರೆ ಅದು ರಜೆ ಹೇಗಾಗುತ್ತದೆ. ಸರ್ಕಾರ ಷರತ್ತು ರಹಿತವಾಗಿ ಬೇಡಿಕೆ ಈಡೇರಿಸಲು ಸಿದ್ಧವಾಗಿದ್ದರೂ ಅಧಿಕಾರಿಗಳು ಬಿಡುತ್ತಿಲ್ಲ. ಅನಗತ್ಯ ಸಲಹೆ ನೀಡಿ ಅನುಕೂಲವಾಗದಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಅತಿಥಿ ಉಪನ್ಯಾಸಕರು ಬೇಸರ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular