HomeKarnatakaಅಮಿತ್ ಶಾ ಕರೆಯ ಮೇರೆಗೆ ದೆಹಲಿಗೆ ಹೋಗಿದ್ದ ಈಶ್ವರಪ್ಪಗೆ ನಿರಾಸೆ: ಬಂಡಾಯ ಸ್ಪರ್ಧೆ ನಿಶ್ಚಿತ

ಅಮಿತ್ ಶಾ ಕರೆಯ ಮೇರೆಗೆ ದೆಹಲಿಗೆ ಹೋಗಿದ್ದ ಈಶ್ವರಪ್ಪಗೆ ನಿರಾಸೆ: ಬಂಡಾಯ ಸ್ಪರ್ಧೆ ನಿಶ್ಚಿತ

ನವದೆಹಲಿ: ಕೇಂದ್ರ ಸಚಿವ ಅಮಿತ್ ಶಾ ಅವರ ಕರೆಯ ಮೇರೆಗೆ ದೆಹಲಿಗೆ ಹೋಗಿದ್ದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ನಿರಾಸೆಯಾಗಿದೆ.

ದೆಹಲಿಗೆ ಈಶ್ವರಪ್ಪ ಅವರನ್ನು ಕರೆಸಿಕೊಂಡು ಅಮಿತ್ ಶಾ ಭೇಟಿಯಾಗಿಲ್ಲ. ದೆಹಲಿಗೆ ಈಶ್ವರಪ್ಪ ತಲುಪಿದ ನಂತರ ಭೇಟಿ ಕಾರ್ಯಕ್ರಮ ರದ್ದಾಗಿದೆ ಎಂದು ಅಮಿತ್ ಶಾ ಅವರ ಕಚೇರಿಯಿಂದ ಮಾಹಿತಿ ಬಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಇನ್ನು ಯಾರನ್ನು ಭೇಟಿಯಾಗುವುದಿಲ್ಲ. ಶಿವಮೊಗ್ಗದಲ್ಲಿ ನನ್ನ ಸ್ಪರ್ಧೆ ಖಚಿತ ಎಂದು ಹೇಳಿದ್ದಾರೆ.

ದೆಹಲಿಗೆ ಹೋಗುವ ಮೊದಲು ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾಯಿಸಿದರೆ ಮಾತ್ರ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳುವುದಾಗಿ ಈಶ್ವರಪ್ಪ ತಿಳಿಸಿದ್ದರು. ಆದರೆ, ಅಮಿತ್ ಶಾ ಭೇಟಿ ಸಾಧ್ಯವಾಗಿಲ್ಲ. ದೆಹಲಿಯಲ್ಲಿ ಮಾತನಾಡಿದ ಈಶ್ವರಪ್ಪ, ನನ್ನ ಸ್ಪರ್ಧೆಗೆ ಪರೋಕ್ಷವಾಗಿ ಅಮಿತ್ ಶಾ ಬೆಂಬಲ ನೀಡಿರುವಂತಿದೆ. ಅವರ ಕಚೇರಿಯಿಂದ ಭೇಟಿ ರದ್ದಾಗಿದೆ ಎಂದು ಮಾಹಿತಿ ಬಂದಿದೆ. ಇನ್ನು ಶಿವಮೊಗ್ಗದಲ್ಲಿ ನನ್ನ ಸ್ಪರ್ಧೆ ಖಚಿತ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular