ಜಾಮೀನಿನ ಮೇಲೆ ಹೊರಬಂದ ಪೋಕ್ಸೊ ಆರೋಪಿಯಿಂದ ಬೆದರಿಕೆ: ಅರೆಬೆತ್ತಲೆಗೊಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ

ಬೆಳಗಾವಿ: ಪೋಕ್ಸೊ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಗ್ರಾಮಕ್ಕೆ ಬಂದ ಆರೋಪಿಗೆ ಸಂತ್ರಸ್ತ ಬಾಲಕಿಯ ಕುಟುಂಬದವರು ಹಿಗ್ಗಾಮುಗ್ಗಾ ಥಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆ ಬೈಲಹೊಂಗಲದ ತಾಲೂಕಿನ ದೊಡ್ಡವಾಡ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಘಟನೆ ನಡೆದಿದೆ. ಸವದತ್ತಿ ತಾಲೂಕಿನ ಮಲ್ಲೂರ ಗ್ರಾಮದ ಯುವಕನೊಬ್ಬ ಅಪ್ರಾಪ್ತೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಕರೆದುಕೊಂಡು ಪರಾರಿಯಾಗಿದ್ದ. ಬಳಿಕ ಆತನನ್ನು ಪೋಕ್ಸೊ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದರು.

ಕೆಲವು ತಿಂಗಳ ಹಿಂದೆ ಪೋಕ್ಸೊ ಪ್ರಕರಣದಲ್ಲಿ ಬಂಧಿತನಾಗಿ ನಾಲ್ಕು ತಿಂಗಳು ಜೈಲು ಸೇರಿದ್ದ ಯುವಕ ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. ಆತ ಗ್ರಾಮಕ್ಕೆ ಮರಳಿ ಬಂದು ಬಾಲಕಿಯ ಮನೆಗೆ ತೆರಳಿದ್ದಲ್ಲದೇ, ಸಂತ್ರಸ್ತೆ, ಅವರ ತಾಯಿ ಮತ್ತು ಸಂಬಂಧಿಕರಿಗೆ ಅವಾಚ್ಯವಾಗಿ ನಿಂದಿಸಿ ನಿಮ್ಮನ್ನೆಲ್ಲಾ ಸುಟ್ಟು ಹಾಕುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಇದರಿಂದ ಆಕ್ರೋಶಗೊಂಡ ಸಂತ್ರಸ್ತೆಯ ಸಂಬಂಧಿಕರು ಆರೋಪಿಯನ್ನು ಹಿಗ್ಗಾಮುಗ್ಗಾ ಥಳಿಸಿ ಚಪ್ಪಲಿಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ. ಘಟನೆ ಬಳಿಕ ಗ್ರಾಮದಿಂದ ಪರಾರಿಯಾದ ಆರೋಪಿ ದೊಡ್ಡವಾಡ ಪೊಲೀಸ್ ಠಾಣೆಗೆ ಹೋಗಿ ಸಂತ್ರಸ್ತೆ ಮತ್ತು ಆಕೆಯ ಸಂಬಂಧಿಕರ ವಿರುದ್ಧ ದೂರು ನೀಡಿದ್ದಾನೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read