HomeKarnatakaತಂದೆ - ತಾಯಿ ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಕೆಗೆ ಹೊರಟ HDK

ತಂದೆ – ತಾಯಿ ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಕೆಗೆ ಹೊರಟ HDK

ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ಅದಕ್ಕೂ ಮುನ್ನ ತಮ್ಮ ತಂದೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ತಾಯಿ ಚನ್ನಮ್ಮ ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ.

ಇದೇ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಎಲ್ಲಾ ಸರಿಯಾಗಿದೆ, ಯಾವುದೇ ಸಮಸ್ಯೆ ಇಲ್ಲ ಎಂದು ಸುಮಲತಾ ಅಂಬರೀಶ್ ಅವರ ಬೆಂಬಲ ಕುರಿತ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಆದರೆ ಕುಮಾರಸ್ವಾಮಿಯವರ ನಾಮಪತ್ರ ಸಲ್ಲಿಕೆ ವೇಳೆ ಸುಮಲತಾ ಅಂಬರೀಶ್ ಉಪಸ್ಥಿತರಿರುವುದು ಡೌಟ್ ಎಂದು ಹೇಳಲಾಗುತ್ತಿದೆ.

ಕುಮಾರಸ್ವಾಮಿಯವರ ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮೊದಲಾದವರು ಹಾಜರಿರಲಿದ್ದು, ಬಳಿಕ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular