ಮೈಸೂರು : ಮೈಸೂರಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 98.52 ಕೋಟಿ ರೂ. ಮೊತ್ತದ ಬಿಯರ್ ಜಪ್ತಿ ಮಾಡಿಕೊಂಡಿದ್ದಾರೆ.
ಮೈಸೂರು ಜಿಲ್ಲೆಯ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಬಿಯರ್ ತಯಾರಿಕಾ ಘಟಕದಲ್ಲಿ ಲೆಕ್ಕಕ್ಕಿಂತ ಅಧಿಕ ದಾಸ್ತಾನು ಸಂಗ್ರಹ ಮಾಡಿರುವುದು ಪತ್ತೆಯಾಗಿದ್ದು, ಭಾರಿ ಪ್ರಮಾಣದ ಮದ್ಯವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಈ ಸಂಬಂಧ 17 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಿಯರ್ ಜಪ್ತಿ ಮಾಡಿಕೊಂಡಿದ್ದಾರೆ.