HomeKarnatakaBIG NEWS: ಮಾಜಿ ಸಚಿವರ ಮನೆ ಎದುರೇ ಸರಗಳ್ಳತನ; ವಿಳಾಸ ಕೇಳುವ ನೆಪದಲ್ಲಿ ಮಹಿಳೆಯರ ಸರ...

BIG NEWS: ಮಾಜಿ ಸಚಿವರ ಮನೆ ಎದುರೇ ಸರಗಳ್ಳತನ; ವಿಳಾಸ ಕೇಳುವ ನೆಪದಲ್ಲಿ ಮಹಿಳೆಯರ ಸರ ಕದ್ದು ಪರಾರಿಯಾದ ಖದೀಮರು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಸರಗಳ್ಳ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮುಂಜಾನೆ ವಾಕಿಂಗ್ ಗೆ ತೆರಳಿದ್ದ ಮಹಿಳೆಯರನ್ನು ತಡೆದ ಬೈಕ್ ನಲ್ಲಿ ಬಂದ ಕಳ್ಳರು ಮಹಿಳೆ ಕತ್ತಿನಲ್ಲಿದ್ದ ಸರ ಕದ್ದು ಪರಾರಿಯಾಗಿರುವ ಘಟನೆ ಜಿಲ್ಲೆಯ ಮಲ್ಲೇಶ್ವರ ನಗರದಲ್ಲಿ ನಡೆದಿದೆ.

ಮುಂಜಾನೆ 5 ಗಂಟೆ ಸುಮಾರಿಗೆ ಇಬ್ಬರು ಮಹಿಳೆಯರು ವಾಕಿಂಗ್ ಗೆ ತೆರಳಿದ್ದರು. ಈ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ವಿಳಾಸ ಕೇಳುವ ನೆಪದಲ್ಲಿ ಮಹಿಳೆಯರನ್ನು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಬೈಕ್ ನಲ್ಲಿದ್ದ ಒಬ್ಬಾತ ತಕ್ಷಣ ಬೈಕ್ ನಿಂದ ಕೆಳಗಿಳಿದು ಓರ್ವ ಮಹಿಳೆಯ ಕೊರಳಲ್ಲಿದ್ದ ಬಂಗಾರದ ಸರ ಕಿತ್ತುಕೊಂಡಿದ್ದಾನೆ. ಕ್ಷಣಾರ್ಧದಲ್ಲಿ ಇಬ್ಬರೂ ಬೈಕ್ ನಲ್ಲಿ ಎಸ್ಕೇಪ್ ಆಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರಗಳ್ಳತನದ ಈ ದೃಶ್ಯ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮನೆಯ ಗೇಟ್ ಬಳಿಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಹಿಳೆಯ ಕೊರಳಲ್ಲಿದ್ದ 30 ಗ್ರಾಂ ಚಿನ್ನದ ಸರವನ್ನು ಕಳ್ಳರು ಎಗರಿಸಿದ್ದಾರೆ ಎನ್ನಲಾಗಿದೆ. ಕೋಟೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular