ಬೆಂಗಳೂರು : ನಾಳೆ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.ಈ ಬಗ್ಗೆ ಸಂಸದಾ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
‘ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ. ಈಗ ಬಿಜೆಪಿ ನಾಯಕರ ಸಮ್ಮುಖದಲ್ಲಿ 5 ಏಪ್ರಿಲ್ 2024ರ ಶುಕ್ರವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವೆ. ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳ, ಡಾ.ಅಂಬರೀಶ್ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ’ ಎಂದು ಪೋಸ್ಟ್ ಮಾಡಿದ್ದಾರೆ.
ನಾಳೆ ಬೆಳಗ್ಗೆ 11:30 ರ ಸುಮಾರಿಗೆ ಬಿಜೆಪಿ ಪಕ್ಷದ ಕಚೇರಿಯಲ್ಲಿ ಪಕ್ಷದ ಪ್ರಮುಖರ ಜೊತೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ, ಬಿ.ವೈ ವಿಜಯೇಂದ್ರ ಮತ್ತಿತರಲಿದ್ದಾರೆ.
ನಮ್ಮ ಮಂಡ್ಯ, ನನ್ನ ಆದ್ಯತೆ ನಮ್ಮ ಮಂಡ್ಯದ ಸಮಗ್ರ ಅಭಿವೃದ್ಧಿಗೆ ನಿಮ್ಮ ನಿರಂತರ ಬೆಂಬಲ ಮತ್ತು ಬದ್ಧತೆಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನಾನು ಮೊದಲ ಬಾರಿಗೆ ಸಂಸದೆಯಾಗಿ – ಅದೂ ಸ್ವತಂತ್ರ ಅಭ್ಯರ್ಥಿಯಾಗಿ ಇಷ್ಟೆಲ್ಲ ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಧ್ಯವಾsಯಿತು. ಮುಂದಿನ ದಿನಗಳಲ್ಲಿಯೂ ಮಂಡ್ಯ ಜಿಲ್ಲೆಯ ಸೊಸೆಯಾಗಿ , ಮನೆ ಮಗಳಾಗಿ, ನನ್ನ ಜನತೆಯ ನಾಡಿ ಮಿಡಿತವಾಗಿ, ಈ ಜಿಲ್ಲೆಯ ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುತ್ತೇನೆ. ವಿಕಸಿತ ಮಂಡ್ಯಕ್ಕಾಗಿ ಎಲ್ಲರೂ ಜೊತೆಯಾಗಿ ಕೆಲಸ ಮಾಡೋಣ ಎಂದು ಪೋಸ್ಟ್ ಮಾಡಿದ್ದಾರೆ.