HomeIndiaಭಾರತದ ಮೊದಲ ಪ್ರಧಾನಿ ಸುಭಾಷ್ ಚಂದ್ರ ಬೋಸ್ ಎಂದು ಟ್ರೋಲ್ ಗೆ ಒಳಗಾದ ಬಿಜೆಪಿ ಅಭ್ಯರ್ಥಿ,...

ಭಾರತದ ಮೊದಲ ಪ್ರಧಾನಿ ಸುಭಾಷ್ ಚಂದ್ರ ಬೋಸ್ ಎಂದು ಟ್ರೋಲ್ ಗೆ ಒಳಗಾದ ಬಿಜೆಪಿ ಅಭ್ಯರ್ಥಿ, ನಟಿ ಕಂಗನಾ ರನಾವತ್ | ವಿಡಿಯೋ ವೈರಲ್

ಸುಭಾಷ್ ಚಂದ್ರ ಬೋಸ್ ಅವರನ್ನು ಸ್ವತಂತ್ರ ಭಾರತದ ಮೊದಲ ಪ್ರಧಾನಿ ಎಂದು ಕರೆದಿದ್ದಕ್ಕಾಗಿ ಕಂಗನಾ ರನಾವತ್ ಟ್ರೋಲ್ ಮಾಡಲಾಗಿದೆ.

ಹಿಮಾಚಲದ ಮಂಡಿಯ ಬಿಜೆಪಿ ಲೋಕಸಭಾ ಅಭ್ಯರ್ಥಿಯೂ ಆಗಿರುವ ನಟಿ-ರಾಜಕಾರಣಿ ಕಂಗನಾ ರನಾವತ್ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ಸ್ವತಂತ್ರ ಭಾರತದ ಮೊದಲ ಪ್ರಧಾನಿ ಎಂದು ಕರೆದರು. ಟೈಮ್ಸ್ ನೌ ಶೃಂಗಸಭೆಯಲ್ಲಿ ನಿರೂಪಕಿ ನವಿಕಾ ಕುಮಾರ್ ಅವರು ಕಂಗನಾ ರನೌತ್ ಅವರನ್ನು ಸಂದರ್ಶಿಸಿದಾಗ ಅವರು ವಿಲಕ್ಷಣ ಹೇಳಿಕೆ ನೀಡಿದ್ದಾರೆ. ಈ ವಿಡಿಯೋವನ್ನು ಕಾಂಗ್ರೆಸ್ ನಾಯಕ ಬಿ.ವಿ. ಶ್ರೀನಿವಾಸ್, ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮತ್ತು ಇತರರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ನಟ ಪ್ರಕಾಶ್ ರಾಜ್ ಕೂಡ ಕಂಗನಾ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. “ಸುಪ್ರೀಮ್ ಜೋಕರ್ಸ್ ಪಾರ್ಟಿಯ ಕೋಡಂಗಿಗಳು… ವಾಟ್ ಎ ಡಿಸ್ಗ್ರೇಸ್” ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ವೀಡಿಯೊವನ್ನು ರಿಟ್ವೀಟ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular