ಬೆಂಗಳೂರು : ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ವಿರುದ್ಧ ಕಿಡಿಗೇಡಿ ಮಾಡಿದ ಅವಹೇಳಕಾರಿ ಪೋಸ್ಟ್ ಕೋಲಾಹಲಕ್ಕೆ ಕಾರಣವಾಗಿದೆ.
@GAJAPADE6 ಹೆಸರಿನ ಟ್ವಿಟರ್ ಖಾತೆಯಿಂದ, “ಶುಭ ಕಾರ್ಯಕ್ಕೆ ಮುತ್ತೈದೆಯರನ್ನು ಕರೆಯಬೇಕು. ಗಂಡ ಸತ್ತ ಮುಂ.. ಯರನ್ನು ಕರೀಬಾರದು. ಆರ್ಸಿಬಿ ಅನ್ಬಾಕ್ಸ್ ಇವೆಂಟ್ಗೆ ಈ ಮುಂ…ಯನ್ನು ಕರೆದಿದ್ದಕ್ಕೆ ಎಲ್ಲ ಮ್ಯಾಚ್ ಸೋಲ್ತಾ ಇದ್ದಾರೆ” ಎಂದು #Yuvarajkumar #PuneethRajkumar #Yuva #Dboss #DevilTheHero ಎಂಬ ಹ್ಯಾಷ್ಟ್ಯಾಗ್ ಹಾಕಿ ಪೋಸ್ಟ್ ಮಾಡಿದ್ದಾರೆ. ಪೋಸ್ಟ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ನಂತರ ಎಕ್ಸ್ ಖಾತೆಯಲ್ಲಿದ್ದ ಪೋಸ್ಟ್ ಡಿಲೀಟ್ ಮಾಡಲಾಗಿದೆ.ಆರ್ ಸಿಬಿ ಸೋಲಿಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಕಾರಣ ಎಂದು ನಟ ದರ್ಶನ್ ಅಭಿಮಾನಿಗಳು ಆರೋಪಿಸಿದ್ದು, ಕೀಳು ಮಟ್ಟದಲ್ಲಿ ಅವಮಾನ ಮಾಡಿದ್ದಾರೆ. ಇದರಿಂದ ನೊಂದಿರುವ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು, ದರ್ಶನ್ ಅಭಿಮಾನಿ ಬಳಗದ ವಿರುದ್ಧ ದೂರು ನೀಡಲು ಮುಂದಾಗಿವೆ.
ಇದೀಗ ಈ ಪೋಸ್ಟ್ ವಿಚಾರ ನಟ ದರ್ಶನ್ ಗಮನಕ್ಕೂ ಬಂದಿದ್ದು, ನಟ ದರ್ಶನ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಪೋಸ್ಟ್ ಬಗ್ಗೆ ಅಖಿಲ ಕರ್ನಾಟಕ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘ(ರಿ)ಕೇಂದ್ರ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಪುನೀತ್ ದರ್ಶನ್ ಗೌಡ್ರು ಪ್ರತಿಕ್ರಿಯೆ ನೀಡಿದ್ದಾರೆ.”ಈ ಪೋಸ್ಟ್ ನಟ ದರ್ಶನ್ ಅವರ ಗಮನಕ್ಕೂ ಬಂದಿದೆ. ಈ ಬಗ್ಗೆ ಕರೆ ಮಾಡಿ ಮಾತನಾಡಿದರು. ಈ ರೀತಿ ಮಾಡುವುದು ತಪ್ಪು. ಬೇರೆ ಯಾರೋ ಬೇಕಂತಲೇ ಮಾಡಿ ನಮ್ಮ ಮೇಲೆ ಹೇಳುತ್ತಿದ್ದಾರೆ, ಇದು ಯಾರು ಮಾಡಿದ್ದಾರೋ ಗೊತ್ತಿಲ್ಲ. ಈ ಬಗ್ಗೆ ವಿಚಾರಿಸಿ ಕ್ರಮ ಕೈಗೊಳ್ಳಿ.. ” ಎಂದು ದರ್ಶನ್ ಹೇಳಿರುವುದಾಗಿ ತಿಳಿಸಿದ್ದಾರೆ.