ಬೆಂಗಳೂರು : ಬೆಂಗಳೂರಿನ ಮೆಜೆಸ್ಟಿಕ್ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.
ತ್ಯಾಗರಾಜನಗರ ನಂದೀಶ್ ಎಂಬಾತ ಬೆಂಗಳೂರಿನ ಮೆಜೆಸ್ಟಿಕ್ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇವರು ಚಾರ್ಟೆಡ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದು, ಸಿಎ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.