HomeKarnatakaBIG NEWS: ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಪರ ಪ್ರಚಾರ ಮಾಡ್ತಾರಾ ಮಂಡ್ಯ ಸಂಸದೆ? ಸುಮಲತಾ ಹೇಳಿದ್ದೇನು?

BIG NEWS: ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಪರ ಪ್ರಚಾರ ಮಾಡ್ತಾರಾ ಮಂಡ್ಯ ಸಂಸದೆ? ಸುಮಲತಾ ಹೇಳಿದ್ದೇನು?

ಬೆಂಗಳೂರು: ಸಂಸದೆ ಸುಮಲತಾ ಆಂಬರೀಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪರ ಸುಮಲತಾ ಚುನಾವಣಾ ಪ್ರಚಾರ ನಡೆಸಲಿದ್ದಾರಾ? ಎಂಬ ಕುತೂಹಲ ಮೂಡಿದೆ. ಈ ಬಗ್ಗೆ ಸ್ವತಃ ಸುಮಲತಾ ಪ್ರತಿಕ್ರಿಯೆ ನೀಡಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಪರ ಪ್ರಚಾರ ಮಾಡ್ತೀರಾ? ಎಂದು ಈ ಹಿಂದೆ ಸುದ್ದಿಗಾರರು ಕೇಳಿದ್ದ ಪ್ರಶ್ನೆಗೆ ಬಿಜೆಪಿಗೆ ಸೇರ್ಪಡೆಯಾದ ಬಳಿಕ ಮಾತನಾಡುತ್ತೇನೆ ಎಂದಿದ್ದರು. ಇದೀಗ ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿರುವ ಸುಮಲತಾ ಅಂಬರೀಶ್, ಲೋಕಸಭಾ ಚುನಾವಣೆ ಕೇವಲ ಮಂಡ್ಯ ಕ್ಷೇತ್ರದಲ್ಲಿ ಮಾತ್ರ ನಡೆಯುತ್ತಿಲ್ಲ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಕ್ಷದ ವರಿಷ್ಠರು ಯಾವುದೇ ಕ್ಷೇತ್ರದಲ್ಲಿ ಪ್ರಚಾರ ಮಾಡುವಂತೆ ಹೇಳಿದರೂ ಅಲ್ಲಿ ಪ್ರಚಾರ ಮಾಡುತ್ತೇನೆ. ಬರೀ ಮಂಡ್ಯ ಮಾತ್ರವಲ್ಲ ಎಲ್ಲಿ ಹೇಳುತ್ತಾರೆ ಅಲ್ಲಿ ಪ್ರಚಾರ ಮಾಡಲು ಸಿದ್ಧ ಎಂದಿದ್ದಾರೆ.

ಇನ್ನುಮುಂದೆ ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕಾಗುತ್ತದೆ. ಅಲ್ಲಿ ಮುಖಂಡರು, ಕಾರ್ಯಕರ್ತರು ಎಲ್ಲರೂ ಇರುತ್ತಾರೆ. ಎಲ್ಲರ ಜೊತೆಗೂಡಿ ಕೆಲಸ ಮಾಡುತ್ತೇನೆ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular