ಬೆಂಗಳೂರು : ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಕೀಳುಮಟ್ಟದ ಪೋಸ್ಟ್ ಮಾಡಿದ ಹಿನ್ನೆಲೆ ಕಿಡಿಗೇಡಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಮಿಷನರ್ ಗೆ ದೂರು ಸಲ್ಲಿಕೆ ಮಾಡಲಾಗಿದೆ.
ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಬರೆದ ಕೀಳು ಮಟ್ಟದ ಪೋಸ್ಟ್ ಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಆಕ್ರೋಶ ವ್ಯಕ್ತ ಪಡಿಸಿದ್ದು, ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಪೊಲೀಸ್ ಕಮಿಷನರ್ ಭೇಟಿ ಮಾಡಿ ಈಗಾಗಲೇ ದೂರು ಕೂಡ ನೀಡಿದ್ದಾರೆ.
@GAJAPADE6 ಹೆಸರಿನ ಟ್ವಿಟರ್ ಖಾತೆಯಿಂದ, “ಶುಭ ಕಾರ್ಯಕ್ಕೆ ಮುತ್ತೈದೆಯರನ್ನು ಕರೆಯಬೇಕು. ಗಂಡ ಸತ್ತ ಮುಂ.. ಯರನ್ನು ಕರೀಬಾರದು. ಆರ್ಸಿಬಿ ಅನ್ಬಾಕ್ಸ್ ಇವೆಂಟ್ಗೆ ಈ ಮುಂ…ಯನ್ನು ಕರೆದಿದ್ದಕ್ಕೆ ಎಲ್ಲ ಮ್ಯಾಚ್ ಸೋಲ್ತಾ ಇದ್ದಾರೆ” ಎಂದು #Yuvarajkumar #PuneethRajkumar #Yuva #Dboss #DevilTheHero ಎಂಬ ಹ್ಯಾಷ್ಟ್ಯಾಗ್ ಹಾಕಿ ಪೋಸ್ಟ್ ಮಾಡಿದ್ದಾರೆ. ಪೋಸ್ಟ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ನಂತರ ಎಕ್ಸ್ ಖಾತೆಯಲ್ಲಿದ್ದ ಪೋಸ್ಟ್ ಡಿಲೀಟ್ ಮಾಡಲಾಗಿದೆ.ಆರ್ ಸಿಬಿ ಸೋಲಿಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಕಾರಣ ಎಂದು ನಟ ಆರೋಪಿಸಿದ್ದು, ಕೀಳು ಮಟ್ಟದಲ್ಲಿ ಅವಮಾನ ಮಾಡಿದ್ದಾರೆ.