HomeKarnatakaBIG NEWS: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಸಮನ್ಸ್

BIG NEWS: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಸಮನ್ಸ್

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣ ಸಂಬಂಧ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಸಂಕಷ್ಟ ಎದುರಾಗಿದೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟಾ ಶ್ರೀನಿವಾಸ್ ಪೂಜಾರಿಗೆ ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಕೋಟಾ ಶ್ರೀನಿವಾಸ್ ಪೂಜಾರಿ ಜೊತೆಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಆರ್.ಮೆಂಡನ್ ಅವರಿಗೂ ಸಮನ್ಸ್ ನೀಡಿದ್ದು, ಮೇ 27ರಂದು ಖುದ್ದು ಕೋರ್ಟ್ ಗೆ ಹಾಜರಾಗುವಂತೆ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಟಪಾಡಿ ಖಾಸಗಿ ಕಾಲೇಜು ಆವರಣದಲ್ಲಿ ಮಾರ್ಚ್ 30ರಂದು ಚುನಾವಣಾ ಅಧಿಕಾರಿಗಳ ಅನುಮತಿ ಇಲ್ಲದೇ ಪ್ರಚಾರ ಸಭೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

For Latest News Updates, Join Our Whatsapp Community🚩
RELATED ARTICLES

Most Popular