ಬೆಂಗಳೂರು: ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ 47 ವಿದ್ಯಾರ್ಥಿನಿಯರು ಅತಿಸಾರ ಬೇಧಿಯಿಂದ ತೀವ್ರ ಅಸ್ವಸ್ಥರಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೇಲ್ನೋಟಕ್ಕೆ ಗ್ಯಾಸ್ಟ್ರೋ ಎಂಟರೈಟಿಸ್ ಸಮಸ್ಯೆ ಎಂದು ವೈದ್ಯರು ದೃಢಪಡಿಸಿದ್ದು, ಕಾಲರಾ ಶಂಕೆಯಿಂದ ರೋಗಿಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಮಲ್ಲೇಶ್ವರದ ಖಾಸಗಿ ಪಿಜಿಯಲ್ಲಿ ಯುವತಿಗೆ ಕಾಲರಾ ಇಲ್ಲದಿರುವುದು ದೃಢಪಟ್ಟಿದೆ. ಇದೇ ವೇಳೆ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರು ಅತಿಸಾರ ಬೇಧಿಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವುದು ಆತಂಕ ಮೂಡಿಸಿದೆ.
ತೀವ್ರ ಬೇಧಿ, ವಾಂತಿ ಮತ್ತು ನಿರ್ಜಲೀಕರಣ ಸಮಸ್ಯೆಯಿಂದ 47 ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲಾಗಿದ್ದು, ಇವರಲ್ಲಿ 28 ಮಂದಿ ಟ್ರಾಮಾ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.