HomeKarnatakaಲೋಕಸಭೆ ಚುನಾವಣೆಯಲ್ಲಿ ಈ ನಾಲ್ವರು ಶಾಸಕರು ಗೆದ್ದರೆ ವಿಧಾನಸಭೆ, ಪರಿಷತ್ ಗೆ ಉಪ ಚುನಾವಣೆ

ಲೋಕಸಭೆ ಚುನಾವಣೆಯಲ್ಲಿ ಈ ನಾಲ್ವರು ಶಾಸಕರು ಗೆದ್ದರೆ ವಿಧಾನಸಭೆ, ಪರಿಷತ್ ಗೆ ಉಪ ಚುನಾವಣೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ನಾಲ್ವರು ಶಾಸಕರು ಸ್ಪರ್ಧಿಸಿದ್ದು, ಒಂದು ವೇಳೆ ಅವರು ಜಯಗಳಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದಲ್ಲಿ ತೆರವಾದ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.

ಶಿಗ್ಗಾವಿ ಶಾಸಕ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾವೇರಿಯಿಂದ, ಚನ್ನಪಟ್ಟಣ ಶಾಸಕ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಸಂಡೂರು ಕಾಂಗ್ರೆಸ್ ಶಾಸಕ ಈ. ತುಕಾರಾಂ ಬಳ್ಳಾರಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಕಣದಲ್ಲಿದ್ದಾರೆ.

ಈ ನಾಯಕರು ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿ ಸಂಸದರಾಗಿ ಆಯ್ಕೆಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದಲ್ಲಿ ಶಿಗ್ಗಾವಿ, ಚನ್ನಪಟ್ಟಣ, ಸಂಡೂರು ಹಾಗೂ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿ 2028 ರ ಜನವರಿ 5ರವರೆಗೆ ಇದೆ. ವಿಧಾನಸಭೆ ಸದಸ್ಯರಾಗಿರುವ ಹೆಚ್.ಡಿ. ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ತುಕಾರಾಂ ಅವರ ಅವಧಿ 2028ರ ಮೇ 20ರ ವರೆಗೂ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular