alex Certify BREAKING : ‘ರಾಮೇಶ್ವರಂ ಕೆಫೆ’ ಸ್ಪೋಟ ಪ್ರಕರಣಕ್ಕೆ ಟ್ವಿಸ್ಟ್ ; ಈಗಾಗಲೇ A-1 ಆರೋಪಿ ಅರೆಸ್ಟ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ರಾಮೇಶ್ವರಂ ಕೆಫೆ’ ಸ್ಪೋಟ ಪ್ರಕರಣಕ್ಕೆ ಟ್ವಿಸ್ಟ್ ; ಈಗಾಗಲೇ A-1 ಆರೋಪಿ ಅರೆಸ್ಟ್..!

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಈಗಾಗಲೇ ಪ್ರಕರಣದ ಎ1 ಆರೋಪಿಯನ್ನು ಬಂಧಿಸಲಾಗಿದೆ.

ಹೌದು, ಶಿವಮೊಗ್ಗದ ತುಂಗಾ ತೀರದ ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಈಗಾಗಲೇ ಜೈಲು ಸೇರಿದ ಮಾಜ್ ಮುನೀರ್ ನನ್ನೇ ಈ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ ಮೊದಲ ಆರೋಪಿಯನ್ನಾಗಿ ಮಾಡಿದೆ. ಜೈಲು ಸೇರುವ ಮುನ್ನ ಹಲವು ಕಡೆ ಸ್ಪೋಟಕ್ಕೆ ಸ್ಕೆಚ್ ಹಾಕಿದ ಹಿನ್ನೆಲೆ ಈತನನ್ನು ಎ 1 ಆರೋಪಿಯನ್ನಾಗಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿದೆ.

ಎರಡು ಮತ್ತು ಮೂರನೇ ಆರೋಪಿಗಳನ್ನಾಗಿ ಮತಿನ್ ಮತ್ತು ಮುಸಾವಿರ್ ಹೆಸರನ್ನು ಉಲ್ಲೇಖಿಸಲಾಗಿದೆ . ಹಾಗೂ ಈಗ ಬಂಧನಕ್ಕೊಳಗಾದ ಮುಜಾಮಿಲ್ ಷರೀಪ್ ನ್ನು 4 ನೇ ಆರೋಪಿಯನ್ನಾಗಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿದೆ.

ತೀರ್ಥಹಳ್ಳಿಯ ಬಿಜೆಪಿ ಮುಖಂಡ ವಶಕ್ಕೆ

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 10 ದಿನದ ಹಿಂದೆ ಬೆಳ್ಳಂ ಬೆಳಗ್ಗೆ ಎನ್ ಐ ಎ ಅಧಿಕಾರಿಗಳು ಹಲವು ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಿದ್ದರು. ಈ ಬೆನ್ನಲ್ಲೇ ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ಎನ್ ಐ ಎ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿಗೂ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೂ ಲಿಂಕ್ ಇದೆ ಎಂದು ಹೇಳಲಾಗಿದ್ದು, ತನಿಖೆಯಿಂದಷ್ಟೇ ನಿಖರವಾದ ಸತ್ಯ ಹೊರ ಬೀಳಲಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು.

ಮಾರ್ಚ್ 1 ರಂದು ಬೆಂಗಳೂರಿನ ವೈಟ್ ಫೀಲ್ಡ್ ಪ್ರದೇಶದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ ಒಂಬತ್ತು ಜನರು ಗಾಯಗೊಂಡಿದ್ದು, ಒಂದು ವಾರದ ನಂತರ ಮಾರ್ಚ್ 9 ರ ಬೆಳಗ್ಗೆ 6 ಗಂಟೆಯಿಂದ ಬೆಂಗಳೂರಿನ ಕೆಫೆ ಆರಂಭವಾಗಿತ್ತು. ಬೆಂಗಳೂರಿನ ವೈಟ್ ಫೀಲ್ಡ್ ಪ್ರದೇಶದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಸಂಭವಿಸಿತ್ತು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...