ಬೆಂಗಳೂರು : 2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿಗೆ ಉಚಿತ(ಸಿಬಿಎಸ್ಇ) (ಆಂಗ್ಲ ಮಾಧ್ಯಮ) ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಏಪ್ರಿಲ್, 15 ರವರೆಗೆ ಅವಧಿ ವಿಸ್ತರಿಸಲಾಗಿದೆ.
ವಸತಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, 5ನೇ ತರಗತಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಆನ್ಲೈನ್ https://sevasindhu.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.