ರಾಮನಗರ : ರಾಮನಗರದಲ್ಲಿ ಫಾರ್ಮ್ ಹೌಸ್ ಗೆ ನುಗ್ಗಿ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ.
ಕಗ್ಗಲಿಪುರ ಠಾಣಾ ವ್ಯಾಪ್ತಿಯ ಗಿರಿಗೌಡನ ದೊಡ್ಡಿಯಲ್ಲಿ ಈ ಘಟನೆ ನಡೆದಿದೆ. 53 ವರ್ಷದ ಶಾಂತಿ ಎಂಬ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಮೃತ ಮಹಿಳೆಯ ವಾಹನ ಚಾಲಕನಿಂದ ಕೊಲೆ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ದರೋಡೆ ಮಾಡುವ ಉದ್ದೇಶದಿಂದ ಕೊಲೆ ಮಾಡಿರಬಹುದೇ..? ಅಥವಾ ಇನ್ಯಾವ ಕಾರಣಕ್ಕೆ ಕೊಲೆ ನಡೆದಿದೆ ಎಂಬುದು ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.
ಘಟನೆ ನಡೆದ ಸ್ಥಳಕ್ಕೆ ಕಗ್ಗಲಿಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.