HomeKarnatakaBIG NEWS: ದಿಂಗಾಲೇಶ್ವರ ಶ್ರೀ ಗಳಿಗೆ ಕಾಂಗ್ರೆಸ್ ಗಾಳ.‌.? ಬದಲಾಗ್ತಾರಾ ಧಾರವಾಡ 'ಕೈ' ಅಭ್ಯರ್ಥಿ ?...

BIG NEWS: ದಿಂಗಾಲೇಶ್ವರ ಶ್ರೀ ಗಳಿಗೆ ಕಾಂಗ್ರೆಸ್ ಗಾಳ.‌.? ಬದಲಾಗ್ತಾರಾ ಧಾರವಾಡ ‘ಕೈ’ ಅಭ್ಯರ್ಥಿ ? ಕುತೂಹಲ ಕೆರಳಿಸಿದ ಬೆಳವಣಿಗೆ…!

ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಅವರನ್ನು ಬದಲಿಸಬೇಕೆಂದು ಪ್ರತಿಪಾದಿಸುತ್ತಿರುವ ಶಿರಹಟ್ಟಿ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಸ್ವತಃ ಈ ಬಾರಿಯ ಚುನಾವಣಾ ಕಣಕ್ಕಿಳಿಯುವ ಸಾಧ್ಯತೆ ಇದೆ. ಇದಕ್ಕೆ ಮಠದ ಭಕ್ತರೂ ಸಹ ಬೆಂಬಲಿಸಿದ್ದು, ಇದರ ಮಧ್ಯೆ ಕಾಂಗ್ರೆಸ್ ನಾಯಕರು ದಿಂಗಾಲೇಶ್ವರ ಶ್ರೀಗಳನ್ನು ಸಂಪರ್ಕಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಆನಂದ್ ಅಸೂಟಿ ಅವರ ಹೆಸರನ್ನು ಘೋಷಣೆ ಮಾಡಲಾಗಿದ್ದು, ಒಂದು ವೇಳೆ ದಿಂಗಾಲೇಶ್ವರ ಶ್ರೀಗಳು ಸಮ್ಮತಿಸಿದರೆ ಅವರಿಗೇ ಟಿಕೆಟ್ ನೀಡುವ ಚಿಂತನೆಯನ್ನು ಕಾಂಗ್ರೆಸ್ ನಾಯಕರು ಹೊಂದಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಇದಕ್ಕೆ ನಿರಾಕರಿಸಿ ದಿಂಗಾಲೇಶ್ವರ ಶ್ರೀಗಳು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದರೂ ಸಹ ತನ್ನ ಅಭ್ಯರ್ಥಿಗೆ ಅನುಕೂಲಕರವಾಗಲಿದೆ ಎಂಬ ಲೆಕ್ಕಾಚಾರವೂ ಸಹ ಕಾಂಗ್ರೆಸ್ ನಾಯಕರಲ್ಲಿದೆ.

ಇದರ ಮಧ್ಯೆ ಶುಕ್ರವಾರದಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ದಿಂಗಾಲೇಶ್ವರ ಸ್ವಾಮೀಜಿ, ನನ್ನನ್ನು ಎಲ್ಲ ಪಕ್ಷಗಳ ಪ್ರಮುಖರು ಸಂಪರ್ಕಿಸಿದ್ದಾರೆ. ಪ್ರಹ್ಲಾದ್ ಜೋಶಿ ಅವರನ್ನು ಬದಲಾವಣೆ ಮಾಡಬೇಕು ಎಂಬ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ರಾಜಕಾರಣಕ್ಕೆ ಮಠಾಧಿಪತಿಗಳ ಪ್ರವೇಶ ಅನಿವಾರ್ಯವಾಗಿದೆ ಎಂದು ಹೇಳುವ ಮೂಲಕ ಕುತೂಹಲ ಹೆಚ್ಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular