ಕೋಲಾರ : ಯಾವುದೇ ಕಾರಣಕ್ಕೂ ನಮ್ಮ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಮರು ಉಚ್ಚರಿಸಿದ್ದಾರೆ.
ಕೋಲಾರದ ಮುಳಬಾಗಿಲಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ನಮ್ಮ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ, ಬಡವರ ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತದೆ, ಊಹಾಪೋಹಗಳಿಗೆ ಕಿವಿಗೊಡದಿರಿ ಎಂದು ಹೇಳಿದರು.
ಇತಿಹಾಸ ಪ್ರಸಿದ್ಧ ಕೋಲಾರದ ಮುಳಬಾಗಿಲಿನ ಕುರುಡುಮಲೆ ಗಣಪತಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ನಾಡಿನಲ್ಲಿ ಮಳೆ – ಬೆಳೆ ಸಮೃದ್ಧವಾಗಲಿ, ಜನರ ಬದುಕು ಹಸನಾಗಲಿ ಎಂದು ಪ್ರಾರ್ಥಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ
ಹುಂಡಿಗಳಿಗೆ ಭರ್ಜರಿ ಶಕ್ತಿ
ಶಕ್ತಿ ಯೋಜನೆಯ ಮೂಲಕ ಮಹಿಳೆಯರಿಗೆ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ದೊರಕಿದ ನಂತರದಿಂದ ರಾಜ್ಯದ ದೇವಾಲಯಗಳಿಗೆ ಬರುವ ಭಕ್ತರ ಸಂಖ್ಯೆ ಏರಿಕೆಯಾಗಿ, ಅವುಗಳ ಆದಾಯವೂ ಹೆಚ್ಚಾಗಿದೆ. ಭಕ್ತರಿಂದ ಕಾಣಿಕೆ, ದೇಣಿಗೆ ರೂಪದಲ್ಲಿ ಸಂಗ್ರಹವಾಗುವ ಆದಾಯವನ್ನು ಅದೇ ದೇವಾಲಯದ ಅಭಿವೃದ್ಧಿಗೆ ಕಡ್ಡಾಯವಾಗಿ ಬಳಕೆ ಮಾಡಲಾಗುತ್ತಿದ್ದು, ಶಕ್ತಿಯು ಹಿಂದೂ ಧಾರ್ಮಿಕ ಕೇಂದ್ರಗಳಿಗೆ ಶಕ್ತಿ ತುಂಬಿದೆ ಎಂದರು.