HomeKarnatakaBREAKING : 'ಫಾರ್ಮಸಿ' ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಿ ಹೈಕೋರ್ಟ್ ಆದೇಶ

BREAKING : ‘ಫಾರ್ಮಸಿ’ ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಿ ಹೈಕೋರ್ಟ್ ಆದೇಶ

ಬೆಂಗಳೂರು : ಫಾರ್ಮಸಿ ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಹೌದು, ಚುನಾವಣಾ ಕರ್ತವ್ಯಕ್ಕೆ ಹಾಜರಾಗುವಂತೆ ಫಾರ್ಮಸಿ ಅಧಿಕಾರಿಗಳಿಗೆ ಬಿಬಿಎಂಪಿ ನೀಡಿದ ಆದೇಶಕ್ಕೆ ಹೈಕೋರ್ಟ್ ಇದೀಗ ಮಧ್ಯಂತರ ತಡೆ ನೀಡಿದ್ದು, ಈ ಮೂಲಕ ಫಾರ್ಮಸಿ ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದಿಂದ ರಿಲೀಫ್ ಸಿಕ್ಕಿದೆ.

ಅಧಿಕಾರಿಗಳನ್ನು ಚುನಾವಣಾ ಕರ್ತವ್ಯಕ್ಕೆ ನೇಮಿಸುವಾಗ ಕಾನೂನು ಪಾಲಿಸಬೇಕು ಎಂದು ಹೈಕೋರ್ಟ್ ಬಿಬಿಎಂಪಿಗೆ ಸೂಚನೆ ನೀಡಿದೆ. ಹಾಗೂ ಫಾರ್ಮಸಿ ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಮಪತ್ರ ಪರಿಶೀಲನೆ

ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯಲಿರುವ 14 ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಕಾರ್ಯ ಪೂರ್ಣಗೊಂಡಿದ್ದು, 60 ನಾಮಪತ್ರಗಳು ತಿರಸ್ಕೃತವಾಗಿವೆ.ಒಟ್ಟು 276 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ. 14 ಕ್ಷೇತ್ರಗಳಲ್ಲಿ ಒಟ್ಟು 358 ಅಭ್ಯರ್ಥಿಗಳಿಂದ 492 ನಾಮಪತ್ರ ಸಲ್ಲಿಕೆಯಾಗಿದ್ದು, ಅವುಗಳಲ್ಲಿ 276 ಅಭ್ಯರ್ಥಿಗಳ 384 ನಾಮಪತ್ರ ಕ್ರಮಬದ್ಧವಾಗಿವೆ ಎಂದು ಮುಖ್ಯ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ನಾಮಪತ್ರ ಹಿಂಪಡೆದುಕೊಳ್ಳಲು ಕೊನೆಯ ದಿನವಾಗಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular