ಬೆಳಗಾವಿ: ನನ್ನ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ವೇಳೆ ಜನ ಸೇರಬೇಡಿ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೊದಲಿನಿಂದಲೂ ನಾಲ್ಕೈದು ಜನರೊಂದಿಗೆ ಮಾತ್ರ ನಾಮಪತ್ರ ಸಲ್ಲಿಸುತ್ತಾ ಬಂದಿದ್ದೇನೆ. ಪುತ್ರಿ ಪ್ರಿಯಾಂಕಾ ನಾಮಪತ್ರ ಸಲ್ಲಿಸುವ ವೇಳೆಯೂ ಹಳೆ ರೂಢಿಯನ್ನೇ ಮುಂದುವರೆಸುತ್ತೇನೆ. ಕಾರ್ಯಕರ್ತರು, ಜನ ಸೇರುವುದು ಬೇಡ ಎಂದು ತಿಳಿಸಿದ್ದಾರೆ.
ಪ್ರಿಯಾಂಕಾ ಜಾರಕಿಹೊಳಿ ಯಾವಾಗ ನಾಮಪತ್ರ ಸಲ್ಲಿಸಬೇಕು ಎಂದು ಇನ್ನೂ ತೀರ್ಮಾನಿಸಿಲ್ಲ. ಜಿಲ್ಲೆಯ ಮುಖಂಡರೊಂದಿಗೆ ಚರ್ಚೆ ನಡೆಸಿ ನಾಮಪತ್ರ ಸಲ್ಲಿಕೆ ದಿನಾಂಕ ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ.