HomeKarnatakaರಾಜ್ಯದಲ್ಲಿ ಈವರೆಗೆ 35 ಕೋಟಿ ರೂ. ನಗದು ಸೇರಿ 262 ಕೋಟಿ ರೂ. ಮೊತ್ತದ ಚುನಾವಣಾ...

ರಾಜ್ಯದಲ್ಲಿ ಈವರೆಗೆ 35 ಕೋಟಿ ರೂ. ನಗದು ಸೇರಿ 262 ಕೋಟಿ ರೂ. ಮೊತ್ತದ ಚುನಾವಣಾ ಅಕ್ರಮ ವಸ್ತು ಜಪ್ತಿ

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರ ವಿವಿಧ ತನಿಖಾ ತಂಡಗಳು ಇದುವರೆಗೆ 262 ಕೋಟಿ ರೂ. ಮೊತ್ತದ ಅಕ್ರಮ ವಸ್ತು ಜಪ್ತಿ ಮಾಡಿವೆ.

35 ಕೋಟಿ ರೂಪಾಯಿ ನಗದು ಸೇರಿ 262 ಕೋಟಿ ರೂ. ಮೊತ್ತದ ವಿವಿಧ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. 133 ಕೋಟಿ ರೂಪಾಯಿ ಮೌಲ್ಯದ ಮದ್ಯ, 5.48 ಕೋಟಿ ರೂ ಮೌಲ್ಯದ ಮಾದಕ ವಸ್ತು, 9.49 ಕೋಟಿ ರೂ. ಮೌಲ್ಯದ 16 ಕೆಜಿ ಚಿನ್ನ, 27 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಜಪ್ತಿ ಮಾಡಲಾಗಿದೆ.

ನಗದು, ಮದ್ಯ ಸೇರಿ ವಶಪಡಿಸಿಕೊಂಡ ವಿವಿಧ ವಸ್ತುಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ 1337 ಎಫ್ಐಆರ್ ದಾಖಲಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಮಾಹಿತಿ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular