ಬೆಳಗಾವಿ: ಟ್ರ್ಯಾಕ್ಟರ್ ಗೆ ಗೂಡ್ಸ್ ವಾಹನವೊಂದು ಹಿಂಬದಿಯಿಂದ ಡಿಕ್ಕಿಹೊಡೆದ ಪರಿಣಾಮ ಕೆಳಗೆ ಬಿದ್ದ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬಸ್ತವಾಡ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುವರ್ಣಸೌಧದ ಬಳಿ ಈ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ನಲ್ಲಿ ಕೊತ್ತಂಬರಿ ಸೊಪ್ಪು ತುಂಬಿಕೊಂಡು ರೈತ ಬೆಳಗಾವಿ ಮಾರ್ಕೆಟ್ ಗೆ ಸಾಗುತ್ತಿದ್ದ. ಈ ವೇಳೆ ಹಿಂಬದಿಯಿಂದ ಬಂದ ಗೂಡ್ಸ್ ವಾಹನ ಏಕಾಏಕಿ ಟ್ರ್ಯಾಕ್ಟರ್ ಗೆ ಗುದ್ದಿದೆ. ಅಪಘಾತದ ಭೀಕರತೆಗೆ ರೈತ ಸ್ಥಳದಲ್ಲೇ ಸಾವನ್ನಪ್ಪಿದದರೆ.
ಬಸ್ತವಾಡಗಾಮದ ಮಲ್ಲಪ್ಪ ದೊಡ್ಡಕಲ್ಲನ್ನವರ್ (41) ಮೃತ ರೈತ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.