HomeKarnatakaಬೆಂಗಳೂರಲ್ಲಿ ಪುಡಿ ರೌಡಿಗಳ ಅಟ್ಟಹಾಸ: ಬಿಎಂಟಿಸಿ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ

ಬೆಂಗಳೂರಲ್ಲಿ ಪುಡಿ ರೌಡಿಗಳ ಅಟ್ಟಹಾಸ: ಬಿಎಂಟಿಸಿ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ

ಬೆಂಗಳೂರು: ಬಿಎಂಟಿಸಿ ಚಾಲಕ, ನಿರ್ವಾಹಕರ ಮೇಲೆ ಪುಡಿ ರೌಡಿಗಳು ಲಾಂಗ್ ಬೀಸಿ ಗಾಯಗೊಳಿಸಿದ ಘಟನೆ ಕುಮಾರಸ್ವಾಮಿ ಲೇಔಟ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಮಧ್ಯರಾತ್ರಿ 12:30 ರ ಸುಮಾರಿಗೆ ಕುಡಿದ ಮತ್ತಿನಲ್ಲಿದ್ದ ಪುಂಡರು ಬಸ್ ನಿಲ್ದಾಣದಲ್ಲಿ ಗಲಾಟೆ ಮಾಡಬೇಡಿ ಎಂದು ಹೇಳಿದ ಬಿಎಂಟಿಸಿ ಚಾಲಕ ನಾಗೇಂದ್ರ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಪ್ರಿಲ್ 4ರಂದು ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸಿದ ಚಾಲಕ ನಾಗೇಂದ್ರ ತಡರಾತ್ರಿ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿಕೊಂಡು ಮಲಗಿದ್ದಾರೆ. ಕಂಡಕ್ಟರ್ ಕೂಡ ಬಸ್ ನಲ್ಲಿ ಮಲಗಿದ್ದರು. ಅಲ್ಲಿಗೆ ಬಂದ ಅಪರಿಚಿತರು ಜೋರಾಗಿ ಕೂಗಾಡಿ ಗಲಾಟೆ ಮಾಡಿದ್ದಾರೆ. ಬಸ್ ನಿಲ್ದಾಣದಲ್ಲಿ ಕೂಗಾಡದಂತೆ ಹೇಳಿದ್ದಕ್ಕೆ ಚಾಲಕ ನಾಗೇಂದ್ರ ಅವರ ಮೇಲೆ ಹಲ್ಲೆ ಮಾಡಲಾಗಿದೆ. ಗಾಯಗೊಂಡ ನಾಗೇಂದ್ರ ನಿರ್ವಾಹಕನ ಸಹಾಯದಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular