ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಏಪ್ರಿಲ್ 14ರಂದು ರಾಜ್ಯದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ.
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಮೋದಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ದೇವನಹಳ್ಳಿ ಬಳಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿ ಮೋದಿ ರೋಡ್ ಶೋ ನಡೆಸಲಿದ್ದಾರೆ.
ಹೆಬ್ಬಾಳ ಮತ್ತು ಬ್ಯಾಟರಾಯನಪುರದಲ್ಲಿ ರೋಡ್ ಶೋ ನಡೆಯಲಿದೆ. ಸಮಾವೇಶ ಮತ್ತು ರೋಡ್ ಶೋನಲ್ಲಿ ಭಾಗವಹಿಸಲಿರುವ ಮೋದಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ.